ಬ್ರೇಕಿಂಗ್ ನ್ಯೂಸ್
07-12-23 07:02 pm HK News Desk ದೇಶ - ವಿದೇಶ
ನವದೆಹಲಿ, ಡಿ.7: ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಬಿಜೆಪಿ ಈ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಹೊಸ ಮುಖಗಳಿಗೆ ಮಣೆ ಹಾಕಲಿದೆ ಎಂದು ತಿಳಿದುಬಂದಿದೆ. 2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಮತ್ತು ಭವಿಷ್ಯದಲ್ಲಿ ಹೊಸ ನಾಯಕರನ್ನು ರೂಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು 2024ರ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದು, ಬಿಜೆಪಿ ರಣೋತ್ಸಾಹದಲ್ಲಿದೆ. ಸದ್ಯ ಇದೇ ಖುಷಿಯಲ್ಲಿ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವ ಚರ್ಚೆ ನಡೆಸುತ್ತಿದೆ. ಮೂರು ರಾಜ್ಯಗಳಲ್ಲಿರುವ ಮುಂಚೂಣಿ ನಾಯಕರನ್ನು ಪರಿಗಣಿಸಲಾಗಿದ್ದು ಯಾರು ಸಿಎಂ ಆದಲ್ಲಿ ಲೋಕಸಭೆ ಚುನಾವಣೆಗೆ ಒಳಿತು ಎನ್ನುವ ನೆಲೆಯಲ್ಲಿ ಚಿಂತನೆಯಲ್ಲಿ ತೊಡಗಿದೆ. ಈ ಬಗ್ಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಗಹನ ಚರ್ಚೆ ನಡೆಸಿದ್ದಾರೆ.
ಅಮಿತ್ ಷಾ ಮತ್ತು ಜೆಪಿ ನಡ್ಡಾ ಅವರು ಮೂರು ರಾಜ್ಯಗಳ ಬಿಜೆಪಿ ಉಸ್ತುವಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದು, ರಾಜ್ಯ ನಾಯಕರ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಶೀಘ್ರದಲ್ಲೇ ಮೂರು ರಾಜ್ಯಗಳಿಗೆ ಕೇಂದ್ರ ಬಿಜೆಪಿ ವೀಕ್ಷಕರನ್ನು ನೇಮಿಸಲಿದ್ದು, ಈ ವೀಕ್ಷಕರು ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಸಭೆ ನಡೆಸಿ, ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ.
ಮಧ್ಯಪ್ರದೇಶದಲ್ಲಿ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನರೇಂದ್ರ ಸಿಂಗ್ ತೋಮರ್ ಮತ್ತು ಹಿರಿಯ ರಾಜ್ಯ ನಾಯಕ ಕೈಲಾಶ್ ವಿಜಯವರ್ಗಿಯಾ ಅವರೂ ಮುಖ್ಯಮಂತ್ರಿ ಹುದ್ದೆಗೆ ಆಕಾಂಕ್ಷಿಗಳಾಗಿದ್ದಾರೆ. ಸುದೀರ್ಘ ಕಾಲ ಮುಖ್ಯಮಂತ್ರಿ ಆಗಿರುವ ಶಿವರಾಜ್ ಸಿಂಗ್ ಚೌಹಾಣ್ ಬದಲಾವಣೆ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ.
ರಾಜಸ್ಥಾನದ ಸಿಎಂ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಬಲವಾಗಿ ಹಕ್ಕು ಮಂಡಿಸಿದ್ದಾರೆ. ಆದರೆ ಪಕ್ಷದ ಹೈಕಮಾಂಡ್ ಹೊಸ ನಾಯಕತ್ವ ತರಲು ಮುಂದಾಗಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅರ್ಜುನ್ ರಾಮ್ ಮೇಘವಾಲ್, ಪಕ್ಷದ ರಾಜ್ಯಾಧ್ಯಕ್ಷ ಸಿಪಿ ಜೋಶಿ ಮತ್ತು ಪ್ರಮುಖ ನಾಯಕರಾದ ದಿಯಾ ಕುಮಾರಿ ಹೆಸರು ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿದ್ದಾರೆ. ಆದರೆ ಪಕ್ಷದ ಮೂಲಗಳ ಪ್ರಕಾರ, ಉತ್ತರ ಪ್ರದೇಶದ ಯೋಗಿ ಮಾದರಿಯಲ್ಲಿ ಮತ್ತೊಬ್ಬ ಯೋಗಿಯನ್ನು ಮುಂಚೂಣಿಗೆ ತರಲು ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಹಾಗಾದಲ್ಲಿ ಮಹಂತ್ ಬಾಲಕನಾಥ್ ಎಂಬ ಸ್ವಾಮೀಜಿ ಆ ಹುದ್ದೆಗೇರಲಿದ್ದಾರೆ ಎನ್ನಲಾಗುತ್ತಿದೆ. ಆಲ್ವಾರ್ ಕ್ಷೇತ್ರದ ಸಂಸದರಾಗಿದ್ದ ಯೋಗಿ ಬಾಬಾ ಬಾಲಕನಾಥ್ ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ತಿಜಾರಾ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ರೋಹ್ಟಕ್ ನಗರದ ಬಾಬಾ ಮಸ್ತ್ ನಾಥ್ ಮಠದ ಮುಖ್ಯಸ್ಥರಾಗಿರುವ ಬಾಲಕನಾಥ್, ರಾಜಸ್ಥಾನದ ಯೋಗಿ ಎಂದು ರಾಜಕೀಯ ವಲಯದಲ್ಲಿ ಹೆಸರು ಮಾಡಿದ್ದಾರೆ.
ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೊ, ಧರ್ಮಲಾಲ್ ಕೌಶಿಕ್ ಮತ್ತು ಮಾಜಿ ಐಎಎಸ್ ಅಧಿಕಾರಿ ಓ.ಪಿ ಚೌಧರಿ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಮೂರು ರಾಜ್ಯಗಳಲ್ಲಿ ಯಾರು ಮುಖ್ಯಮಂತ್ರಿ ಸ್ಥಾನಕ್ಕೆ ಏರಲಿದ್ದಾರೆ ಎನ್ನುವ ಕುತೂಹಲ ಇದೆ.
The Bharatiya Janata Party is likely to bring in new face to govern Rajasthan, Madhya Pradesh and Chhattisgarh, media reports said. The saffron party won the recently held Assembly elections in the three states.
23-03-25 11:01 pm
Bangalore Correspondent
Basavaraj Horatti: ಹನಿಟ್ರ್ಯಾಪ್ ಸದ್ದು ; ವಿಧಾನ...
23-03-25 09:50 pm
Honey trap, Karnataka, Rajanna: ರಾಜ್ಯ ರಾಜಕೀಯದ...
23-03-25 06:02 pm
Karnataka Bandh Live, Bangalore, Mangalore Ud...
22-03-25 12:28 pm
Koppal, Sslc Exams, Mother death: SSLC ಪರೀಕ್ಷ...
21-03-25 10:41 pm
23-03-25 02:40 pm
HK News Desk
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
23-03-25 10:44 pm
Mangalore Correspondent
MP Govinda Karajola, Mangalore, Honey Trap: ಸ...
22-03-25 06:48 pm
Mangalore, BJP protest, MLC Bharathi Shetty,...
22-03-25 05:45 pm
Sullia, Mangalore, Rabies death: ನಾಯಿ ಮರಿ ಕಚ್...
22-03-25 03:15 pm
Belthangady, Baby News, Mangalore: ಬೆಳ್ತಂಗಡಿ...
22-03-25 01:07 pm
23-03-25 03:56 pm
HK News Desk
Mangalore Fraud, Online, Telagram: ಟೆಲಿಗ್ರಾಂನ...
22-03-25 10:51 pm
Bangalore Fake Police, Crime: ಪಾರ್ಕ್ನಲ್ಲಿ ಜೋ...
21-03-25 12:44 pm
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm