ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ ರೆಡ್ಡಿ ಪ್ರಮಾಣ ; ಕಾರ್ಯಕ್ರಮದಲ್ಲಿ ಸೋನಿಯಾ, ರಾಹುಲ್, ಸಿದ್ದರಾಮಯ್ಯ, ಡಿಕೆಶಿ ಭಾಗಿ 

07-12-23 11:01 pm       HK News Desk   ದೇಶ - ವಿದೇಶ

ತೆಲಂಗಾಣ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ್ ರೆಡ್ಡಿ ಅವರು ಸೇರಿದ್ದ ಲಕ್ಷಾಂತರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆ 20 ನಿಮಿಷಕ್ಕೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ಹೈದರಾಬಾದ್, ಡಿ.7;  ತೆಲಂಗಾಣ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ್ ರೆಡ್ಡಿ ಅವರು ಸೇರಿದ್ದ ಲಕ್ಷಾಂತರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆ 20 ನಿಮಿಷಕ್ಕೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅಧಿಕಾರದ ಗೌಪ್ಯತೆಯನ್ನು ಬೋಧಿಸಿದರು. ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ರೇವಂತ್ ರೆಡ್ಡಿ ಅವರು ರೇವಂತ್ ರೆಡ್ಡಿ ಅನೆ ನೇನು ಎನ್ನುತ್ತಿದ್ದಂತೆ ಸ್ಟೇಡಿಂಯನಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರ, ರೆಡ್ಡಿ ಅವರ ಬೆಂಬಲಿಗರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಕೊಂಡಗಲ್ ಕ್ಷೇತ್ರದಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದ ರೇವಂತ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು, ಸಚಿವರಾಗಿ ನಾಲಮಾಡ ಉತ್ತಮ್ ಕುಮಾರ್ ರೆಡ್ಡಿ, ಪೊನ್ನಂ ಪ್ರಭಾಕರ್, ಸಿ ದಾಮೋದರ ರಾಜನರಸಿಂಹ ಸೇರಿ 6 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ಹಮ್ಮಿಕೊಂಡಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ವೇದಿಕೆಯಲ್ಲಿ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಎಂಬ ಹೆಸರಿನ ಬದಲಾಗಿ ತೆಲಂಗಾಣದಲ್ಲಿ ಪ್ರಜಾಪ್ರಭುತ್ವಂ ಪ್ರಮಾಣ ವಚನ ಸ್ವೀಕಾರ, ಅಭಿವೃದ್ಧಿಗೆ ಶ್ರೀಕಾರ ಎಂಬ ಡಿಜಿಟಲ್ ಬರಹ ಗಮನ ಸೆಳೆಯಿತು.

Enumula Revanth Reddy was sworn in as the second Chief Minister of Telangana state at 1.20 pm on Thursday in the presence of lakhs of fans and Congress workers.