ಬ್ರೇಕಿಂಗ್ ನ್ಯೂಸ್
11-12-23 01:42 pm HK News Desk ದೇಶ - ವಿದೇಶ
ನವದೆಹಲಿ, ಡಿ.10: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಣಯವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ನಿರ್ಣಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಕುರಿತು ವಿಚಾರಣೆ ಪೂರ್ತಿಗೊಳಿಸಿದ ಸುಪ್ರೀಂಕೋರ್ಟ್ ಸೋಮವಾರ ಮಹತ್ವದ ತೀರ್ಪು ಪ್ರಕಟಿಸಿದೆ.
ರಾಜ್ಯದ ಪರವಾಗಿ ಒಕ್ಕೂಟವು ತೆಗೆದುಕೊಳ್ಳುವ ಪ್ರತಿ ನಿರ್ಧಾರವೂ ಪ್ರಶ್ನೆಗಳಿಗೆ ಒಳಪಡುವುದಿಲ್ಲ. ಇಂತಹ ಪ್ರಶ್ನೆಗಳು ಒಕ್ಕೂಟ ವ್ಯವಸ್ಥೆಯಲ್ಲಿ ಅವ್ಯವಸ್ಥೆ ಮತ್ತು ಅನಿಶ್ಚಿತತೆಗೆ ಕಾರಣವಾಗುತ್ತದೆ ಎಂದು ತೀರ್ಪು ನೀಡಿರುವ ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್, ರಾಷ್ಟ್ರಪತಿ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಬದಲಿಸಲಾಗದ ಪರಿಣಾಮಕಾರಿ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಅರ್ಜಿದಾರರ ವಾದವನ್ನು ಒಪ್ಪಲಾಗದು ಎಂದು ಹೇಳಿದ್ದಾರೆ.
ಭಾರತಕ್ಕೆ ವಿಲೀನವಾದ ನಂತರ ಜಮ್ಮು ಮತ್ತು ಕಾಶ್ಮೀರವು ಪ್ರತ್ಯೇಕ ಆಂತರಿಕ ಸಾರ್ವಭೌಮತ್ವದ ಅಂಶವನ್ನು ಉಳಿಸಿಕೊಂಡಿಲ್ಲ. ಭಾರತದ ಸಂವಿಧಾನದ 1 ಮತ್ತು 370 ನೇ ವಿಧಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ. ಆ ರಾಜ್ಯಕ್ಕೆ ನೀಡಿದ್ದ ಆರ್ಟಿಕಲ್ 370 ವಿಧಿಯ ಸೌಲಭ್ಯ ತಾತ್ಕಾಲಿಕವಾಗಿತ್ತು ಎಂದು ಕೋರ್ಟ್ ಹೇಳಿದೆ.
ರಾಷ್ಟ್ರಪತಿ ಆಳ್ವಿಕೆ ಘೋಷಣೆಯ ನಂತರ ರಾಷ್ಟ್ರಪತಿಗಳ ಕ್ರಮಗಳಿಗೆ ಮಿತಿಗಳಿದ್ದರೂ, ಅವುಗಳಿಗೆ ಸಂವಿಧಾನದ ಮಾನ್ಯತೆ ಇರುತ್ತವೆ. 356ನೇ ವಿಧಿಯಡಿ ರಾಷ್ಟ್ರಪತಿ ಆಳ್ವಿಕೆ ಘೋಷಿಸಿದ ನಂತರ ರಾಜ್ಯಪಾಲರು, ರಾಜ್ಯದ ಶಾಸಕಾಂಗ ಅಧಿಕಾರ ವಹಿಸಿಕೊಳ್ಳಲು ರಾಷ್ಟ್ರಪತಿ ಮತ್ತು ಸಂಸತ್ತಿಗೆ ಅಡ್ಡಿ ಬರುವುದಿಲ್ಲ. ರಾಷ್ಟ್ರಪತಿಗಳ ಆದೇಶಗಳು ದುರುದ್ದೇಶಪೂರಿತ ಅಥವಾ ಅಧಿಕಾರದ ಬಾಹ್ಯ ಚಲಾವಣೆ ಎಂಬುದು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ ಎಂದು ಸಿಜೆಐ ಅಭಿಪ್ರಾಯ ಪಟ್ಟಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದಲ್ಲಿ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನು ಒಳಗೊಂಡಿದ್ದ ಐವರು ಸದಸ್ಯರ ನ್ಯಾಯಪೀಠ ಈ ತೀರ್ಪು ನೀಡಿದೆ. 2019ರ ಆಗಸ್ಟ್ 5ರಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ 370ನೇ ವಿಧಿಯನ್ನು ರದ್ದುಗೊಳಿಸಿತ್ತು. ಈ ನಿರ್ಣಯದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂಗೆ ಸಲ್ಲಿಕೆಯಾಗಿದ್ದವು. 2023ರ ಆ.2ರಂದು ಸಿಜೆಐ ನೇತೃತ್ವದ ಪಂಚಸದಸ್ಯ ಪೀಠವು ಅರ್ಜಿಗಳ ವಿಚಾರಣೆ ಆರಂಭಿಸಿತ್ತು.
ಐವರು ಸದಸ್ಯರ ನ್ಯಾಯಪೀಠ ಅರ್ಜಿಗಳನ್ನು ವಜಾಗೊಳಿಸಿದ್ದಲ್ಲದೆ, ಆರ್ಟಿಕಲ್ 370 ತಾತ್ಕಾಲಿಕ ವಿಧಾನವಾಗಿದ್ದು, ಅದನ್ನು ರದ್ದುಗೊಳಿಸಿದ ನಿರ್ಧಾರವು ಕಾನೂನು ರೀತ್ಯ ಮಾನ್ಯವಾಗಿರುತ್ತದೆ ಎಂದು ಹೇಳಿದೆ. ಈ ಮೂಲಕ ಕೇಂದ್ರ ಸರ್ಕಾರದ ತೀರ್ಮಾನವನ್ನು ಎತ್ತಿ ಹಿಡಿದಿದೆ. ಅಲ್ಲದೆ, ಲಡಾಖ್ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿಸಿದ ಕೇಂದ್ರದ ನಿರ್ಧಾರವನ್ನೂ ಸುಪ್ರೀಂ ಎತ್ತಿ ಹಿಡಿದಿದೆ. ಹಾಗೆಂದು, ಜಮ್ಮು ಕಾಶ್ಮೀರದಲ್ಲಿ ಚುನಾವಣೆ ತಡೆಯುವಂತಿಲ್ಲ. ಹೀಗಾಗಿ 2024ರ ಸಪ್ಟೆಂಬರ್ 30ರೊಳಗೆ ಚುನಾವಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
The Supreme Court proceedings taking a call on the constitutional validity of the Centre's move to scrap 'Article 370', a special status granted to the erstwhile state of Jammu and Kashmir begins. Supreme Court refused to rule on the validity of the Presidential rule imposed in Jammu and Kashmir in December 2018 since it was not specifically challenged by the petitioner, the Chief Justice of India said. Chief Justice of India said Article 370 was a temporary provision.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm