Pakistan, attack, police station: ಪಾಕ್ ಪೊಲೀಸ್ ಠಾಣೆಯಲ್ಲಿ ಆತ್ಮಾಹುತಿ ದಾಳಿ ; ಮೂವರ ಬಲಿ, ಹಲವರು ಗಂಭೀರ, ಹೊಣೆ ಹೊತ್ತುಕೊಂಡ ತೆಹ್ರೀಕ್-ಎ-ಜಿಹಾದ್ ಸಂಘಟನೆ

12-12-23 11:41 am       HK News Desk   ದೇಶ - ವಿದೇಶ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿರುವ ಡೇರಾ ಇಸ್ಮಾಯಿಲ್ ಖಾನ್‌ನಲ್ಲಿರುವ ಪೊಲೀಸ್ ಠಾಣೆಯನ್ನು ಗುರಿಯಾಗಿಸಿ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ಮೂವರು ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದು ಮತ್ತು 10 ಮಂದಿ ಗಾಯಗೊಂಡಿರುವುದಾಗಿ ಪಾಕ್ ಸುದ್ದಿ ಸಂಸ್ಥೆ ವರದಿಮಾಡಿದೆ

ಇಸ್ಲಾಮಾಬಾದ್, ಡಿ 12: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿರುವ ಡೇರಾ ಇಸ್ಮಾಯಿಲ್ ಖಾನ್‌ನಲ್ಲಿರುವ ಪೊಲೀಸ್ ಠಾಣೆಯನ್ನು ಗುರಿಯಾಗಿಸಿ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ಮೂವರು ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದು ಮತ್ತು 10 ಮಂದಿ ಗಾಯಗೊಂಡಿರುವುದಾಗಿ ಪಾಕ್ ಸುದ್ದಿ ಸಂಸ್ಥೆ ವರದಿಮಾಡಿದೆ

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ್ (ಟಿಜೆಪಿ) ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಹೇಳಲಾಗಿದೆ.

ಇಸ್ಮಾಯಿಲ್ ಖಾನ್‌ನಲ್ಲಿರುವ ಪೊಲೀಸ್ ಠಾಣೆಗೆ ಭಯೋತ್ಪಾದಕರ ಗುಂಪೊಂದು ಏಕಾಏಕಿ ದಾಳಿ ನಡೆಸಿ ದಾಳಿ ನಡೆಸಿದ್ದು ಈ ವೇಳೆ ಪಾಕ್ ನ ಮೂವರು ಭದ್ರತಾ ಸಿಬ್ಬಂದಿಗಳು ಹತರಾಗಿದ್ದಾರೆ. ದಾಳಿ ವೇಳೆ ಕನಿಷ್ಠ ಹತ್ತು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

At least four security forces personnel were killed, and 28 others were injured in a suicide attack after a group of terrorists stormed a local police station in Dera Ismail Khan, Khyber Pakhtunkhwa, Pakistan.