ಬ್ರೇಕಿಂಗ್ ನ್ಯೂಸ್
17-11-20 05:21 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 17: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ತಮ್ಮ ಬಾಲ್ಯದಲ್ಲಿ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಿದ್ದರಂತೆ.
ಬರಾಕ್ ಒಬಾಮ ಇತ್ತೀಚೆಗೆ ಬರೆದಿರುವ ‘ಎ ಪ್ರಾಮಿಸ್ಡ್ ಲ್ಯಾಂಡ್ ’ ಎನ್ನುವ ಕೃತಿಯಲ್ಲಿ ಭಾರತದ ಬಗ್ಗೆ ತಮಗಿರುವ ಪ್ರೀತಿಯನ್ನು ವಿವರಿಸಿದ್ದಾರೆ. ಮೊದಲಿನಿಂದಲೂ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಾ ಬಂದಿದ್ದೆ. ಜೊತೆಗೆ, ಪೂರ್ವ ರಾಷ್ಟ್ರಗಳ ಧರ್ಮಗಳ ಬಗೆಗಿದ್ದ ಆಸಕ್ತಿಯೋ ಅಥವಾ ಭಾರತದ ಖಾದ್ಯಗಳ ದಾಲ್ ಮತ್ತು ಕೀಮಾ ತಿನಿಸುಗಳನ್ನು ಆಸಕ್ತಿಯೋ ಏನೋ ಭಾರತದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದೇನೆ ಎಂದು ಬರೆದಿದ್ದಾರೆ.
ಒಬಾಮಾ ಅವರು ತಮ್ಮ ಕೃತಿಯಲ್ಲಿ 2008ರ ಅಧ್ಯಕ್ಷೀಯ ಪ್ರಚಾರದಿಂದ ಆಡಳಿತ ಅವಧಿ ಪೂರ್ಣಗೊಳ್ಳುವ ವರೆಗಿನ ಘಟನಾವಳಿಗಳನ್ನು ಉಲ್ಲೇಖಿಸಿದ್ದಾರೆ. ಇತ್ತೀಚೆಗಷ್ಟೇ ತನ್ನ ಕೃತಿಯಲ್ಲಿ ಭಾರತದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಗೇಲಿ ಮಾಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
'ನಾನು ಅಮೆರಿಕದ ಅಧ್ಯಕ್ಷರಾಗುವ ಮೊದಲು ಭಾರತಕ್ಕೆ ಭೇಟಿ ನೀಡಿರಲಿಲ್ಲ, ಆದರೆ ಆ ದೇಶ ನನ್ನ ಕಲ್ಪನೆಯಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿತ್ತು' ಎಂದು ಕೃತಿಯಲ್ಲಿ ವಿವರಿಸಿದ್ದಾರೆ. ಕೃತಿಯಲ್ಲಿ ಭಾರತ ದೇಶದ ಬಗ್ಗೆ ವರ್ಣಿಸಿದ್ದು, ಜಗತ್ತಿನ ಆರನೇ ಒಂದು ಭಾಗದಷ್ಟು ಜನಸಂಖ್ಯೆ ಹೊಂದಿರುವ, ಎರಡು ಸಾವಿರ ವಿಭಿನ್ನ ಜನಾಂಗಗಳು, 700ಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುವ ಆ ದೇಶ ತನ್ನ ವೈವಿಧ್ಯತೆಯಿಂದಲೇ ಎಲ್ಲರನ್ನೂ ಸೆಳೆಯುತ್ತಿದೆ ಎಂದಿದ್ದಾರೆ.
Former US President Barack Obama said that he has always held a special place for India due to his childhood years spent in Indonesia listening to the epic Hindu tales of the Ramayana and the Mahabharata.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm