ಬ್ರೇಕಿಂಗ್ ನ್ಯೂಸ್
15-12-23 02:44 pm HK News Desk ದೇಶ - ವಿದೇಶ
ಮುಂಬೈ, ಡಿ 15: ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿದೆ.
ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಕಾಟ ಮುಂದುವರೆದಿದೆ.
ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು
ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿದೆ.
Another deep fake video of actress Rashmika Mandanna has gone viral on social media. Just a month ago, his deep fake video had created a lot of buzz. It also led to a debate at the government level. However, another video released is proof that it could not be stopped.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm