ಬ್ರೇಕಿಂಗ್ ನ್ಯೂಸ್
18-11-20 12:48 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 18: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಎದುರು ಸೋಲು ಅನುಭವಿಸಿರುವ ಡೊನಾಲ್ಡ್ ಟ್ರಂಪ್ , ಚುನಾವಣೆಯಲ್ಲಿ ಭಾರಿ ವಂಚನೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ನವೆಂಬರ್ 3ರಂದು ನಡೆದ ಚುನಾವಣೆಯು ಅಮೆರಿಕದ ಇತಿಹಾಸದಲ್ಲಿಯೇ ಅತ್ಯಂತ ಸುರಕ್ಷಿತ ಚುನಾವಣೆ ಎಂದು ಸರ್ಕಾರದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿ ಕ್ರಿಸ್ ಕ್ರೆಬ್ಸ್ ಮತ್ತು ಅವರ ಸಂಸ್ಥೆ ಜಂಟಿಯಾಗಿ ಘೋಷಣೆ ಮಾಡಿತ್ತು. ಕ್ರಿಸ್ ಕ್ರೆಬ್ಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಲಸದಿಂದ ಕಿತ್ತುಹಾಕಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ.

ಜೋ ಬೈಡನ್ ಎದುರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಡೊನಾಲ್ಡ್ ಟ್ರಂಪ್, ಮತ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಪುರಾವೆರಹಿತ ಆರೋಪಗಳನ್ನು ಸತತವಾಗಿ ಮಾಡುತ್ತಿದ್ದಾರೆ.
'2020ರ ಚುನಾವಣೆಯ ಭದ್ರತೆ ಕುರಿತು ಕ್ರಿಸ್ ಕ್ರೆಬ್ಸ್ ಅವರ ಇತ್ತೀಚಿನ ಹೇಳಿಕೆ ತೀವ್ರ ಅಸಮರ್ಪಕವಾಗಿದೆ. ಚುನಾವಣೆಯಲ್ಲಿ ಭಾರಿ ಅಕ್ರಮಗಳು ಮತ್ತು ವಂಚನೆ ನಡೆದಿದೆ' ಎಂದು ಟ್ರಂಪ್ ಹೇಳಿದ್ದಾರೆ.
'ಹೀಗಾಗಿ ತಕ್ಷಣದಿಂದಲೇ ಜಾರಿಯಾಗುವಂತೆ ಕ್ರಿಸ್ ಕ್ರೆಬ್ಸ್ ಅವರನ್ನು ಸೈಬರ್ ಸೆಕ್ಯುರಿಟಿ ಮತ್ತು ಮೂಲಸೌಕರ್ಯ ಸೆಕ್ಯುರಿಟಿ ಸಂಸ್ಥೆಯ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿಕೊಂಡಿದ್ದ ಕ್ರಿಸ್ ಅವರು ತಮ್ಮನ್ನು ಕೆಲಸದಿಂದ ಕಿತ್ತುಹಾಕುವ ಸಾಧ್ಯತೆ ಇದೆ ಎಂದು ಕಳೆದ ವಾರವೇ ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. 'ಸೇವೆ ಸಲ್ಲಿಸುವ ಗೌರವ ನನ್ನದಾಗಿದೆ. ನಾವು ಸರಿಯಾಗಿ ಕೆಲಸ ಮಾಡಿದ್ದೇವೆ. ಇಂದು ರಕ್ಷಿಸಿ ನಾಳೆಯನ್ನು ಭದ್ರಗೊಳಿಸಿದ್ದೇವೆ' ಎಂದು ಕ್ರಿಸ್ ಟ್ವೀಟ್ ಮಾಡಿದ್ದರು.
President Trump took to Twitter, as he does, to announce the termination of Christopher Krebs - who was responsible for online election security, especially blocking outside interference - after he refuted POTUS' claims of election fraud
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm