ಬ್ರೇಕಿಂಗ್ ನ್ಯೂಸ್
21-12-23 10:46 pm HK News Desk ದೇಶ - ವಿದೇಶ
ನವದೆಹಲಿ, ಡಿ.21: ಬಿಜೆಪಿ ಸಂಸದ, ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಭಾರತ ಕುಸ್ತಿ ಫೆಡರೇಷನ್ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ವಿರೋಧ ಕೇಳಿಬಂದಿದೆ. ಇದರ ಬೆನ್ನಲ್ಲೇ ಭಾರತದ ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಘೋಷಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿದ ಸಾಕ್ಷಿ ಮಲಿಕ್, ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬ್ಯುಸಿನೆಸ್ ಪಾರ್ಟನರ್ ಆಗಿರುವ ಸಂಜಯ್ ಸಿಂಗ್ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಮಾನಸಿಕ ನೋವು ತಂದಿದೆ. ಇದಕ್ಕಾಗಿ ನಾನು ಕುಸ್ತಿ ಪಂದ್ಯಗಳಿಂದಲೇ ದೂರವಾಗುತ್ತಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಹೇಳಿದ್ದಾರೆ. ಅಲ್ಲದೆ, ತಮ್ಮ ಶೂ ಕಳಚಿ ಸುದ್ದಿಗೋಷ್ಠಿ ನಡೆಯುತ್ತಿದ್ದ ಟೇಬಲ್ ಮೇಲೆ ಇರಿಸಿ, ಕಣ್ಣೀರು ಸುರಿಸಿದರು. 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಸಾಕ್ಷಿ ಮಲಿಕ್ ಕಂಚಿನ ಪದಕ ಗೆದ್ದು ಜಗತ್ತಿನ ಗಮನ ಸೆಳೆದಿದ್ದರು.
ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಪದಕ ವಿಜೇತ ಮತ್ತೊಬ್ಬ ಕುಸ್ತಿ ಪಟು ವಿನೇಷ್ ಫೋಗಟ್ ಕೂಡಾ ಸುದ್ದಿಗೋಷ್ಠಿಯಲ್ಲಿ ಜೊತೆಗಿದ್ದು ಕಣ್ಣೀರಿಟ್ಟರು. ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಮಹಿಳಾ ಕುಸ್ತಿ ಪಟುಗಳ ಮೇಲೆ ದೌರ್ಜನ್ಯ ಮುಂದುವರಿಯಲಿದೆ. ನಮಗೆ ನ್ಯಾಯ ಸಿಗುವುದು ಹೇಗೆ ಎಂದು ನಮಗೆ ಗೊತ್ತಾಗುತ್ತಿಲ್ಲ. ನಮ್ಮ ಕುಸ್ತಿ ಭವಿಷ್ಯ ಹೇಗೆ ಎಂಬ ಚಿಂತೆ ಶುರುವಾಗಿದೆ. ಎಲ್ಲಿಗೆ ಹೋಗಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಫೋಗಟ್ ಹೇಳಿದರು.
ಕೇಂದ್ರ ಸರ್ಕಾರವು ನಮಗೆ ನೀಡಿದ ಭರವಸೆಯನ್ನು ಈಡೇರಿಸದೇ ಇರುವುದು ದೌರ್ಭಾಗ್ಯ ಎಂದು ಮತ್ತೊಬ್ಬ ಕುಸ್ತಿ ಪಟು ಬಜರಂಗ್ ಪುನಿಯಾ ಬೇಸರ ಹೇಳಿಕೊಂಡರು. ನಮಗೆ ಯಾವುದೇ ಪಕ್ಷದ ಜೊತೆ ಸಂಬಂಧವಿಲ್ಲ. ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ. ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೇವೆ. ಆದರೆ ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತನೇ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದಾರೆ. ಇವರಿಂದ ನಮಗೆ ನ್ಯಾಯ ಸಿಗಬಹುದೇ ಎಂದು ಪುನಿಯಾ ಪ್ರಶ್ನಿಸಿದರು.
Former WFI chief Brij Bhushan Sharan Singh's aid Sanjay Singh has been elected the new president of the Wrestling Federation of India. After numerous postponements earlier in the year, the Wrestling Federation of India elections were held on Thursday, December 21. The voting was held earlier in the day in New Delhi and the counting began soon after the voting process ended.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm