ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.


ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.

ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm