ಬ್ರೇಕಿಂಗ್ ನ್ಯೂಸ್
27-12-23 03:40 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಡಿ 27: ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಕರ್ನಾಟಕದ ಭಕ್ತರ ವಾಹನ ಭೀಕರ ಅಪಘಾತಕ್ಕೀಡಾಗಿ, ನಾಲ್ವರು ದುರ್ಮರಣ ಹೊಂದಿದ್ದಾರೆ. ಬುಧವಾರ ಮುಂಜಾನೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಕರ್ಮಲಾ ತಾಲೂಕಿನ ಪಾಂಡೆ ಗ್ರಾಮದ ಬಳಿ ದುರಂತ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಕರ್ನಾಟಕ ರಾಜ್ಯದವರಾಗಿದ್ದಾರೆ. ಅದೃಷ್ಟವಶಾತ್ ಅಪಘಾತದಲ್ಲಿ 8 ತಿಂಗಳ ಮಗು ಬದುಕುಳಿದಿದೆ.
ಕಲಬುರಗಿಯ ಶ್ರೀಶೈಲ ಚಂಡೇಶ ಕುಂಬಾರ (56) ಶಶಿಕಲಾ ಶ್ರೀಶೈಲ್ ಕುಂಬಾರ (50) ಬಾಗಲಕೋಟೆಯ ಜ್ಯೋತಿ ದೀಪಕ್ ಹಿರೇಮಠ (38) ಸ್ಥಳದಲ್ಲೇ ಮೃತಪಟ್ಟರೆ, ಹುಬ್ಬಳ್ಳಿಯ ಶಾರದಾ ದೀಪಕ್ ಹಿರೇಮಠ (70) ತೀವ್ರವಾಗಿ ಗಾಯಗೊಂಡು ಕರ್ಮಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅಸುನೀಗಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಕರ್ನಾಟಕದ ಕಲಬುರಗಿಯಿಂದ 8 ಮಂದಿ ಭಕ್ತರು ಶಿರಡಿ ಸಾಯಿಬಾಬಾ ದರ್ಶನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಕರ್ಮಲ ತಾಲೂಕಿನ ಪಾಂಡೆ ಗ್ರಾಮದ ಬಳಿ ಕಾರು ತೆರಳುತ್ತಿದ್ದಾಗ ಎದುರಿಗೆ ಬಂದ ಕಂಟೈನರ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತು ಎಂದರೆ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ.
ಬೆಳ್ಳಂಬೆಳಗ್ಗೆ ನಡೆದ ಅಪಘಾತದ ದೊಡ್ಡ ಸದ್ದ ಕೇಳಿದ ಗ್ರಾಮದ ಕೆಲವರು ಸ್ಥಳಕ್ಕೆ ಬಂದು ಕಾರಿನಲ್ಲಿ ಸಿಕ್ಕಿದ್ದವರನ್ನು ಹೊರತೆಗೆದಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಢ ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಪೈಕಿ ತೀವ್ರ ಗಾಯಗೊಂಡಿದ್ದ ಶಾರದಾ ದೀಪಕ್ ಎಂಬುವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುವಾಗ ಮೃತಪಟ್ಟಿದ್ದಾರೆ.
8 ಮಂದಿಯ ಪೈಕಿ ನಾಲ್ವರು ಸಾವಿಗೀಡಾದರೆ, 8 ತಿಂಗಳ ಹಸುಗೂಸು ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಎಲ್ಲ ಗಾಯಾಳುಗಳನ್ನು ಕರ್ಮಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ನಂತರ ಕಂಟೈನರ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A terrible accident took place today (Wednesday) around 5:30 am near Pande (Karmala taluka, district Solapur) on the Paranda-Karmala road in the district. It is reported that four people were killed on the spot and six others were injured in the accident that took place between the container and the car. The accident was so severe that the car involved in the accident hit the container and went down the road and overturned.
21-03-25 10:41 pm
HK News Desk
Sameer MD Video Delete Sowjanya, YouTube: ಸೌಜ...
21-03-25 10:35 pm
DK Shivakumar, BJP Muniratna, Honeytrap Case:...
21-03-25 09:21 pm
Karnataka Bandh News Live: ಕರ್ನಾಟಕ ಬಂದ್ ಕರೆ...
21-03-25 08:06 pm
18 BJP MLAs suspended, assembly: ಸ್ಪೀಕರ್ ಪೀಠಕ...
21-03-25 05:46 pm
21-03-25 04:46 pm
HK News Desk
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
21-03-25 12:44 pm
Bangalore Correspondent
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm