ಬ್ರೇಕಿಂಗ್ ನ್ಯೂಸ್
28-12-23 11:28 am HK News Desk ದೇಶ - ವಿದೇಶ
ಚೆನ್ನೈ, ಡಿ.28: ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಸಂಸ್ಥಾಪಕ ವಿಜಯಕಾಂತ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಗುರುವಾರ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಗುರುವಾರ ಮುಂಜಾನೆ ಅವರ ಪಕ್ಷದ ಡಿಎಂಡಿಕೆ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ.
ವಿಜಯಕಾಂತ್ ಅವರಿಗೆ 71 ವರ್ಷ ವಯಸಾಗಿತ್ತು. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಕೋವಿಡ್‌ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ನಂತರ ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು, ಅವರ ಪತ್ನಿ ಪ್ರೇಮಲತಾ ಅವರು ಕೆಲವು ಹಿಂದೆ ಪಕ್ಷದ ಅಧಿಕಾರವನ್ನು ವಹಿಸಿಕೊಂಡಿದ್ದರು.
ಕಾಜಾ ನಿರ್ದೇಶಿಸಿದ ಇನಿಕ್ಕುಮ್ ಇಳಮೈ (1979) ಸಿನಿಮಾ ಮೂಲಕ ಎಂಟ್ರಿ ಕೊಟ್ಟಿದ್ದರು. ವೃತ್ತಿಜೀವನದಲ್ಲಿ, ವಿಜಯಕಾಂತ್ ಅವರು ಅಮ್ಮನ್ ಕೋಯಿಲ್ ಕಿಜಕ್ಕಲೆ, ಚಿನ್ನ ಗೌಂಡರ್, ವೈದೇಗಿ ಕತಿರುಂಡಾಲ್, ವಲ್ಲರಸು, ವನತೈ ಪೋಲಾ, ಕ್ಯಾಪ್ಟನ್ ಪ್ರಭಾಕರನ್, ಉಳವು ತುರೈ, ಕಣ್ಣುಪಾದ ಪೋಕುತಯ್ಯ, ರಮಣ, ಹೀಗೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 2015ರ ತಮಿಳು ಚಲನಚಿತ್ರ 'ಸಗಪ್ತಂ'ನಲ್ಲಿ ಕೊನೆಯದಾಗಿ ಕಾಣಿಸಿಕೊಂಡರು.
ನಟ ವಿಜಯಕಾಂತ್ 2005 ರಲ್ಲಿ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷವನ್ನು ಸ್ಥಾಪಿಸಿದರು. 2011ರಿಂದ 2016ರವರೆಗೆ ತಮಿಳುನಾಡಿನಲ್ಲಿ ಡಿಎಂಡಿಕೆ ಪ್ರಮುಖ ವಿರೋಧ ಪಕ್ಷವಾಗಿದ್ದು, ವಿಜಯಕಾಂತ್ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. 2006 ರಲ್ಲಿ, ವಿಜಯಕಾಂತ್ ಅವರ ಪಕ್ಷ ಡಿಎಂಡಿಕೆ ತಮಿಳುನಾಡಿನ ಎಲ್ಲಾ 234 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಆದರೆ ವಿಜಯಕಾಂತ್ ಮಾತ್ರ ಚುನಾವಣೆಯಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಉಳಿದ ಎಲ್ಲಾ ಸ್ಥಾನಗಳಲ್ಲಿ ಅವರ ಪಕ್ಷದ ಅಭ್ಯರ್ಥಿಗಳು ಸೋಲನ್ನು ಎದುರಿಸಬೇಕಾಯಿತು. ಆದರೆ, ಈ ಚುನಾವಣೆಯಲ್ಲಿ ಅವರ ಪಕ್ಷ 8.38% ಮತಗಳನ್ನು ಪಡೆದಿತ್ತು.
2009 ರ ಲೋಕಸಭಾ ಚುನಾವಣೆಯಲ್ಲಿಯೂ ವಿಜಯಕಾಂತ್ ಅವರ ಪಕ್ಷಕ್ಕೆ ಇದೇ ರೀತಿಯ ಪರಿಸ್ಥಿತಿ ಸಂಭವಿಸಿತು. ಪಕ್ಷವು ರಾಜ್ಯದ 40 ಲೋಕಸಭಾ ಸ್ಥಾನಗಳಲ್ಲಿ 39 ರಲ್ಲಿ ಸ್ಪರ್ಧಿಸಿತು, ಆದರೆ ಒಂದು ಸ್ಥಾನವನ್ನು ಸಹ ಗೆಲ್ಲಲಿಲ್ಲ. ಈ ಎರಡೂ ಚುನಾವಣೆಗಳಲ್ಲಿ ವಿಜಯಕಾಂತ್ ಪಕ್ಷ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿಲ್ಲ.
2011 ರಲ್ಲಿ ವಿಜಯಕಾಂತ್ ಅವರ ಪಕ್ಷವು 41 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ 29 ಸ್ಥಾನಗಳನ್ನು ಗೆದ್ದುಕೊಂಡಿತು. ಈ ಚುನಾವಣೆಯಲ್ಲಿ ಜಯಲಲಿತಾ ಅವರ ಪಕ್ಷ (ಎಐಎಡಿಎಂಕೆ) ನಂತರ ಡಿಎಂಡಿಕೆ ಎರಡನೇ ಪಕ್ಷವಾಗಿ ಹೊರಹೊಮ್ಮಿತು, ವಿಜಯಕಾಂತ್ ವಿರೋಧ ಪಕ್ಷದ ನಾಯಕರಾದರು. ಆದರೆ, ಇದಾದ ನಂತರ 2016 ಮತ್ತು 2021ರ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಅವರ ಪಕ್ಷಕ್ಕೆ ಸಾಧ್ಯವಾಗಲಿಲ್ಲ.
Indian politician and former actor, who was known by his stage name Vijayakanth passed away on December 28. Fondly called ‘Captain’, he was admitted to a private hospital on Thursday due to pneumonia.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm