ಬ್ರೇಕಿಂಗ್ ನ್ಯೂಸ್
30-12-23 07:42 pm HK News Desk ದೇಶ - ವಿದೇಶ
ಅಯೋಧ್ಯೆ, ಡಿ.30: ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಎರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಸೇರಿದಂತೆ ದೇಶದ ವಿವಿಧ ನಗರಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ.
ಹೊಸದಾಗಿ ಚಾಲನೆಗೊಂಡ ವಂದೇ ಭಾರತ್ ರೈಲುಗಳು ಮಂಗಳೂರು- ಮಡ್ಗಾಂವ್ (ಗೋವಾ) ಮತ್ತು ಬೆಂಗಳೂರು-ಕೊಯಮತ್ತೂರು (ತಮಿಳುನಾಡು) ನಡುವೆ ಸಂಚರಿಸಿದರೆ, ಅಮೃತ್ ಭಾರತ್ ರೈಲು ಪಶ್ಚಿಮ ಬಂಗಾಳದ ಮಾಲ್ಡಾ ಮತ್ತು ಬೆಂಗಳೂರು ನಡುವೆ ಸಂಚರಿಸಲಿದೆ. ಈಗಾಗಲೇ ರಾಜ್ಯದಲ್ಲಿ ಬೆಂಗಳೂರು- ಬೆಳಗಾವಿ, ಬೆಂಗಳೂರು- ಹೈದರಾಬಾದ್, ಮೈಸೂರು -ಚೆನ್ನೈ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸಂಚರಿಸುತ್ತಿವೆ. ಇದೀಗ ಮಂಗಳೂರು- ಮಡ್ಗಾಂವ್ ಹಾಗೂ ಬೆಂಗಳೂರು- ಕೊಯಮತ್ತೂರು ನಡುವೆಯೂ ವಂದೇ ಭಾರತ್ ಸಂಚಾರ ಆರಂಭಗೊಂಡಿದೆ.
ಅತ್ಯಾಧುನಿಕ ತಂತ್ರಜ್ಞಾನ ಆಧರಿತವಾಗಿರುವ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಗಂಟೆಗೆ 130 ಕಿಮೀ ವೇಗದಲ್ಲಿ ಚಲಿಸುತ್ತದೆ. 22 ಕೋಚ್ಗಳನ್ನ ಒಳಗೊಂಡಿದ್ದು, 1,800 ಪ್ರಯಾಣಿಕರು ಏಕಕಾಲಕ್ಕೆ ಪ್ರಯಾಣಿಸಲು ಅವಕಾಶ ಇದೆ. ಎರಡು ಅಮೃತ್ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಅಯೋಧ್ಯಧಾಮ ಜಂಕ್ಷನ್ಗೆ ಮೋದಿ ಚಾಲನೆ
ಒಟ್ಟು 8 ವಿಶೇಷ ರೈಲುಗಳಿಗೆ ಹಸಿರು ನಿಶಾನೆ ತೋರುವುದಕ್ಕೂ ಮುನ್ನ ಮೋದಿ ಅವರು ಅಯೋಧ್ಯೆಯಲ್ಲಿ ಅಭಿವೃದ್ಧಿಪಡಿಸಿದ ಅಯೋಧ್ಯ ಧಾಮ ಜಂಕ್ಷನ್ ಹೆಸರಿನ ರೈಲು ನಿಲ್ದಾಣದ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ ಪ್ರಮುಖ ಗಣ್ಯರು ಜೊತೆಯಲ್ಲಿದ್ದರು.
ಏರ್ಪೋರ್ಟ್ ಮಾದರಿಯ ರೈಲ್ವೇ ನಿಲ್ದಾಣದಂತಿರುವ ಅಯೋಧ್ಯಧಾಮ ಜಂಕ್ಷನ್ ರೈಲು ನಿಲ್ದಾಣವನ್ನು ಸಂಪೂರ್ಣ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗಿದೆ. ರಾಮ ಮಂದಿರದಿಂದ ಕೇವಲ 2.1 ಕಿ.ಮೀ. ದೂರದಲ್ಲಿ ಈ ನಿಲ್ದಾಣ ನಿರ್ಮಾಣಗೊಂಡಿದ್ದು, ಮೊದಲ ಹಂತದಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಕೆಲಸ ಕಾರ್ಯ ನಡೆದಿದೆ. 10,000 ಚದರ ಮೀಟರ್ ವಿಸ್ತೀರ್ಣ ಹೊಂದಿದೆ. ರೈಲು ನಿಲ್ದಾಣ ಅಭಿವೃದ್ಧಿಗೆ 3 ಪ್ಲಾಟ್ ಫಾರಂಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಎರಡನೇ ಹಂತದಲ್ಲಿ 480 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯಲಿದೆ.
Prime Minister Narendra Modi, who was in Ayodhya on Saturday to inaugurate a host of projects, flagged off two Amrit Bharat Express trains. The Prime Minister flagged off the Darbhanga-Ayodhya-Anand Vihar Terminal Amrit Bharat Express from the revamped Ayodhya Dham railway station. The Malda Town-Sir M Visvesvaraya Terminus (Bengaluru) Amrit Bharat Express was flagged off virtually.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm