ಬ್ರೇಕಿಂಗ್ ನ್ಯೂಸ್
20-11-20 12:44 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನ.20 : ಅಮೆರಿಕದ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಜೋ ಬೈಡನ್ ರಿಪಬ್ಲಿಕನ್ ಪಕ್ಷದ ಸಾಂಪ್ರದಾಯಿಕ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ಜಾರ್ಜಿಯಾ ರಾಜ್ಯದಲ್ಲಿ ಜಯಭೇರಿ ಬಾರಿಸಿದ್ದಾರೆ ಎಂದು ರಾಜ್ಯದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1992ರ ಬಳಿಕ ಮೊದಲ ಬಾರಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯೊಬ್ಬರು ಜಾರ್ಜಿಯಾದಲ್ಲಿ ಗೆಲುವು ದಾಖಲಿಸಿದ್ದಾರೆ. 1992ರಲ್ಲಿ ಬಿಲ್ ಕ್ಲಿಂಟನ್ ಬಳಿಕ ಡೆಮಾಕ್ರಟಿಕ್ ಪಕ್ಷದ ಯಾವೊಬ್ಬ ಅಧ್ಯಕ್ಷೀಯ ಅಭ್ಯರ್ಥಿಗೆ ಜಾರ್ಜಿಯಾ ರಾಜ್ಯದ ಜನತೆ ಮತ ಹಾಕಿಲ್ಲ. ಜಾರ್ಜಿಯಾದಲ್ಲಿ ಒಟ್ಟು 16 ಎಲೆಕ್ಟೋರಲ್ ಕಾಲೇಜ್ ಮತಗಳಿದ್ದು, ಇದು ಶುಕ್ರವಾರ ಪ್ರಮಾಣೀಕರಿಸಲ್ಪಡುವ ನಿರೀಕ್ಷೆಯಿದೆ.
ಸುಮಾರು 5 ಮಿಲಿಯನ್ ಮತಗಳನ್ನು ಹಲವು ದಿನಗಳ ಕಾಲ ಕೈಯಲ್ಲಿ ಮರು ಎಣಿಕೆ ಮಾಡಿದ ಬಳಿಕ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಬೈಡನ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ 12,284 ಮತಗಳಿಂದ ಜಯ ಸಾಧಿಸಿದ್ದಾರೆ. ಮರು ಮತ ಎಣಿಕೆಯ ಮೊದಲು ಬೈಡನ್ ಸುಮಾರು 14,000 ಮತಗಳಿಂದ ಮುನ್ನಡೆಯಲ್ಲಿದ್ದರು.
ಪೆನ್ಸಿಲ್ವೇನಿಯ, ಮಿಚಿಗನ್ ಹಾಗೂ ವಿಸ್ಕಾನ್ಸಿನ್ನಲ್ಲಿ ಬೈಡನ್ ಜಯ ಸಾಧಿಸಿದ ಬಳಿಕ ನವೆಂಬರ್ 7 ರಂದು ಬೈಡನ್ರನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜೇತರಾಗಿದ್ದಾರೆ ಎಂದು ಘೋಷಿಸಲಾಗಿತ್ತು. ಜಾರ್ಜಿಯಾದ 16 ಮತಗಳ ಸಹಿತ ಇದೀಗ ಬೈಡನ್ 306 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದು, ಟ್ರಂಪ್ 232 ಮತಗಳನ್ನು ಪಡೆದಿದ್ದಾರೆ.
President-elect Joe Biden on November 19 was projected a winner in Georgia's election by the Associated Press after Georgia's election officials affirmed Joe Biden's lead post a full hand recount of nearly 5 million ballots.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm