ಬ್ರೇಕಿಂಗ್ ನ್ಯೂಸ್
20-01-24 07:13 pm HK News Desk ದೇಶ - ವಿದೇಶ
ರಾಮೇಶ್ವರ, ಜ.20: ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಕಠಿಣ ವೃತ ಕೈಗೊಂಡಿರುವ ಪ್ರಧಾನಿ ಮೋದಿ, ಶ್ರೀರಾಮ ರಾಮಾಯಣ ಕಾಲದಲ್ಲಿ ಬಂದು ಹೋಗಿದ್ದ ಸ್ಥಳ, ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಶನಿವಾರ ತಮಿಳುನಾಡಿನ ರಾಮೇಶ್ವರಂಗೆ ತೆರಳಿದ ಪ್ರಧಾನಿ ಮೋದಿ ಪವಿತ್ರ ಸಮುದ್ರ ಸ್ನಾನ ಮಾಡಿದ್ದಾರೆ.
ಬಳಿಕ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ ಪ್ರಧಾನಿ ಮೋದಿ ರಂಗನಾಥ ಸ್ವಾಮಿ ದರ್ಶನ ಪಡೆದಿದ್ದಾರೆ. ರಾಮೇಶ್ವರದ ಅಗ್ನಿತೀರ್ಥ ಸಮುದ್ರದಲ್ಲಿ ಮೋದಿ ಪವಿತ್ರ ಸ್ನಾನ ಮಾಡಿದ್ದಾರೆ. ರುದ್ರಾಕ್ಷಿ ಮಾಲೆ ಹಿಡಿದು ಜಪಿಸುತ್ತಾ ಮೋದಿ ಪವಿತ್ರ ಸ್ನಾನ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಸಮುದ್ರ ಸ್ನಾನ ಮಾಡಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಮೋದಿ, ಮಂದಿರದ ಆವರಣದಲ್ಲಿ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ್ದಾರೆ.
ರಂಗನಾಥ ಸ್ವಾಮಿ ದೇವಸ್ಥಾನಕ್ಕೂ ರಾಮಾಯಣಕ್ಕೂ ನೇರ ಸಂಬಂಧವಿದೆ. ರಂಗನಾಥ ಸ್ವಾಮಿ ದೇವಸ್ಥಾನದಲ್ಲಿರುವ ಶಿವಲಿಂಗವನ್ನು ಭಗವಾನ್ ಶ್ರೀರಾಮ ಹಾಗೂ ಸೀತಾದೇವಿ ಪ್ರತಿಷ್ಠಾಪಿಸಿರುವ ಐತಿಹ್ಯವಿದೆ. ಶ್ರೀರಾಮ, ಸೀತಾದೇವಿ ಇದೇ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿರುವ ಕುರಿತು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಿದೆ.
ಇದಕ್ಕೂ ಮುನ್ನ ಚೆನ್ನೈನಲ್ಲಿ ಪ್ರಧಾನಿ ಮೋದಿ 6ನೇ ಆವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್‌ಗೆ ಅಧಿಕೃತ ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ದೇಶದೆಲ್ಲೆಡೆಯ 5500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಜ.31ರ ವರೆಗೆ ನಡೆಯಲಿದೆ.
#WATCH | Prime Minister Narendra Modi offers prayers at Sri Arulmigu Ramanathaswamy Temple in Rameswaram, Tamil Nadu. The Prime Minister also took a holy dip into the sea here. pic.twitter.com/v7BCSxdnSk
— ANI (@ANI) January 20, 2024
Prime Minister Narendra Modi who is in Tamil Nadu on his 3-day visit to the state performed 'smaran' and offered prayers at Sri Arulmigu Ramanathaswamy Temple in Rameswaram.The main deity worshipped in the temple is Sri Ramanathaswamy, which is a form of Lord Shiva. It is a widely held belief that the main lingam in this temple was installed and worshipped by Sri Rama and Mata Sita.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm