ಬ್ರೇಕಿಂಗ್ ನ್ಯೂಸ್
22-01-24 01:15 pm Hk News Desk ದೇಶ - ವಿದೇಶ
ಅಯೋಧ್ಯೆ, ಜ.22: ಕೋಟಿ ಕಂಗಳ ಕನಸು, ಜಗತ್ತಿನಾದ್ಯಂತ ಭಕ್ತರ ನಿರೀಕ್ಷೆಯಂತೆ ಅಯೋಧ್ಯಾ ಪುರಿಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯ ವಿಧಿಬದ್ಧವಾಗಿ ನೆರವೇರಿದೆ.
12 ಗಂಟೆಗೆ ಸರಿಯಾಗಿ ಹೂವಿನ ಗುಚ್ಛವನ್ನು ಹಿಡಿದು ಮಂದಿರ ಪ್ರವೇಶ ಮಾಡಿದ ಮೋದಿ, ಎರಡು ಮಂಟಪದಲ್ಲಿ ಪೂಜೆ ನೆರವೇರಿಸಿದರು. ಪ್ರತಿಷ್ಠಾ ಕಾರ್ಯ ನೆರವೇರುತ್ತಿದ್ದಂತೆ ಮೊದಲ ಬಾರಿಗೆ ಸರ್ವಾಲಂಕೃತ ಬಾಲರಾಮನ ಮೂರ್ತಿಯನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು.
ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪೂಜಾ ವಿಧಿವಿಧಾನಗಳು 11 ಗಂಟೆ ವೇಳೆಗೆ ಆರಂಭಗೊಂಡಿತ್ತು. 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆಯ ಪೂಜಾ ಕಾರ್ಯ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ರಾಜ್ಯಪಾಲರು ಸೇರಿದಂತೆ ಐವರು ಗಣ್ಯರಿಗೆ ಮಾತ್ರ ಗರ್ಭಗುಡಿಯಲ್ಲಿ ಅವಕಾಶ ನೀಡಲಾಗಿದೆ. ಮೋದಿ ಮತ್ತು ಮೋಹನ್ ಭಾಗವತ್ ಸ್ವತಃ ಹೂವಿನ ಅಭಿಷೇಕ ಮತ್ತು ಆರತಿ ಎತ್ತಿ ಪೂಜೆ ನೆರವೇರಿಸಿದ್ದಾರೆ. ಆಚಾರ್ಯ ಗಣೇಶ್ವರ್ ದ್ರಾವಿಡ್, ಲಕ್ಷ್ಮೀಕಾಂತ ದೀಕ್ಷಿತ್ ನೇತೃತ್ವದಲ್ಲಿ ನೂರಾರು ರಿತ್ವಿಜರು ಪ್ರತಿಷ್ಠಾ ಪೂಜಾ ಕೈಂಕರ್ಯ ನಡೆಸಿದ್ದಾರೆ.
ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಂಡಿದ್ದಾರೆ. ರಾಮ ಮಂದಿರ ಸುತ್ತಮುತ್ತ ಸೇರಿದಂತೆ ಅಯೋಧ್ಯೆ ನಗರದಲ್ಲಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿರುವ ಅಯೋಧ್ಯೆ ನಗರಿ ಸಂಪೂರ್ಣವಾಗಿ ಸಾವಿರಾರು ಕ್ವಿಂಟಾಲ್ ಹೂಗಳಿಂದ ಅಲಂಕೃತಗೊಂಡಿದೆ. ಅಯೋಧ್ಯೆ ಸೇರಿದಂತೆ ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಮ ಮಂತ್ರ ಮೊಳಗುತ್ತಿದೆ. ನೂರಾರು ಕಡೆ ಹಿಂದು ಸಂಘಟನೆಗಳ ವತಿಯಿಂದ ರಾಮ ತಾರಕಯಜ್ಞ ನೆರವೇರಿದೆ
‘Mukhya Yajman’ Prime Minister Narendra Modi leads ‘Pran Pratishtha’ rituals at Ram temple inauguration. See pictures from the ceremony here.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm