ಬ್ರೇಕಿಂಗ್ ನ್ಯೂಸ್
23-01-24 09:56 pm HK News Desk ದೇಶ - ವಿದೇಶ
ನವದೆಹಲಿ, ಜ.23: ಬಿಹಾರದ ಮಾಜಿ ಮುಖ್ಯಮಂತ್ರಿ, ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಸಮತಾವಾದ ಪ್ರತಿಪಾದನೆ ಮಾಡಿದ್ದ ಅಗ್ರ ನಾಯಕನಿಗೆ ಮರಣೋತ್ತರವಾಗಿ ಪ್ರಶಸ್ತಿ ಘೋಷಿಸಲಾಗಿದೆ. ಬುಧವಾರ ಕರ್ಪೂರಿ ಠಾಕೂರ್ ಅವರ 100ನೇ ಜನ್ಮದಿನಾಚರಣೆ. ಅದಕ್ಕೂ ಮುನ್ನ ರಾಷ್ಟ್ರಪತಿ ಭವನ ಠಾಕೂರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದೆ. ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿತ್ತು. ಕೇಂದ್ರ ಸರ್ಕಾರ ಈ ಘೋಷಣೆ ಮಾಡುತ್ತಿದ್ದಂತೆ ಜೆಡಿಯು ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
ಕರ್ಪೂರಿ ಠಾಕೂರ್ ಬಿಹಾರದ ಹಿಂದುಳಿದ ವರ್ಗಗಳ ಹೋರಾಟಕ್ಕಾಗಿ ಹೆಸರು ಗಳಿಸಿದ್ದರು. ಕರ್ಪೂರಿ ಅವರು ಎರಡು ಬಾರಿ ಬಿಹಾರದ ಉಪ ಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿ ಮತ್ತು ದಶಕಗಳ ಕಾಲ ವಿರೋಧ ಪಕ್ಷದ ಶಾಸಕ ಮತ್ತು ನಾಯಕರಾಗಿದ್ದರು.
ಠಾಕೂರ್ ಅವರಿಗೆ 'ಭಾರತ ರತ್ನ' ಪುರಸ್ಕಾರ ಲಭಿಸಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದು ಸಾಮಾಜಿಕ ನ್ಯಾಯದ ಶ್ರೇಷ್ಠ ಐಕಾನ್ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲು ನಿರ್ಧರಿಸಿದ್ದೇವೆ. ಅವರ ಜನ್ಮ ಶತಮಾನೋತ್ಸವ ಆಚರಿಸುತ್ತಿರುವ ಸಮಯದಲ್ಲಿ ಈ ನಿರ್ಧಾರ ದೇಶದ ಜನರಿಗೆ ಹೆಮ್ಮೆ ತರುತ್ತದೆ ಎಂದಿದ್ದಾರೆ.
ಅವಕಾಶ ವಂಚಿತರ ಉನ್ನತಿಗಾಗಿ ಕರ್ಪೂರಿ ಅವರ ಅಚಲ ಬದ್ಧತೆ ಮತ್ತು ದೂರದೃಷ್ಟಿಯ ನಾಯಕತ್ವವು ಭಾರತದ ಸಾಮಾಜಿಕ-ರಾಜಕೀಯ ಸನ್ನಿವೇಶದಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ಸಮಾಜದಲ್ಲಿ ಸಾಮರಸ್ಯವನ್ನು ಇನ್ನಷ್ಟು ಉತ್ತೇಜಿಸಲು ಅವರ ಧ್ಯೇಯವು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Two-time Bihar chief minister Karpoori Thakur, considered the fountainhead of OBC politics in Bihar, has been named for the country's highest civilian award Bharat Ratna posthumously, a Rashtrapati Bhawan communique said on Tuesday on the eve of his birth centenary.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:27 am
HK News Staffer
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm