ಬ್ರೇಕಿಂಗ್ ನ್ಯೂಸ್
29-01-24 10:20 pm HK News Desk ದೇಶ - ವಿದೇಶ
ನವದೆಹಲಿ, ಜ.29: 56 ರಾಜ್ಯಸಭೆ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಸಲು ದಿನಾಂಕವನ್ನು ಭಾರತ ಚುನಾವಣೆ ಆಯೋಗ ಪ್ರಕಟಿಸಿದೆ. ಇದರಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ರಾಜ್ಯದಿಂದ ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಸೀರ್ ಅಹಮದ್ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 15 ರಾಜ್ಯಗಳಿಂದ ಏಕಕಾಲದಲ್ಲಿ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 9 ಮಂದಿ ಕೇಂದ್ರ ಸಚಿವರ ರಾಜ್ಯಸಭೆ ಅವಧಿ ಎಪ್ರಿಲ್ ವೇಳೆಗೆ ಮುಗಿಯಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಥಾನವೂ ಖಾಲಿಯಾಗಲಿದೆ.
ಕರ್ನಾಟಕ ಮಾತ್ರವಲ್ಲದೇ ಆಂಧ್ರ ಪ್ರದೇಶದ 3 ಸ್ಥಾನ, ಬಿಹಾರ್ 6 ಸ್ಥಾನ, ಗುಜರಾತ್ 4 ಸ್ಥಾನ, ಹರಿಯಾಣ, ಚತ್ತೀಸ್ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ತಲಾ ಒಂದು ಸ್ಥಾನ, ಉತ್ತರ ಪ್ರದೇಶ 10 ಸ್ಥಾನ, ತೆಲಂಗಾಣ, ಒಡಿಸ್ಸಾ, ರಾಜಸ್ಥಾನದಲ್ಲಿ ಮೂರು ಸ್ಥಾನ, ಪಶ್ಚಿಮ ಬಂಗಾಳದಲ್ಲಿ 5 ಸ್ಥಾನ, ಮಹಾರಾಷ್ಟ್ರದಲ್ಲಿ 6 ಸ್ಥಾನ, ಮಧ್ಯ ಪ್ರದೇಶದಲ್ಲಿ 5 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆಯ ಬಲ-ಬಲ ನೋಡುವುದಾದರೆ ಕಾಂಗ್ರೆಸ್ ಪಕ್ಷ ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಸೇರಿ 137 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 66 ಸ್ಥಾನ, ಜೆಡಿಎಸ್ 19 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಸಭಾ ಚುನಾವಣೆಯಲ್ಲಿ ಮೂವರು ಸಂಸದರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಹೊಂದಿದೆ.
The Election Commission on Monday notified elections to 56 Rajya Sabha seats that will be held on February 27. The retiree list includes BJP president J.P. Nadda, nine Union Ministers and former Prime Minister Manmohan Singh.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm