ಬ್ರೇಕಿಂಗ್ ನ್ಯೂಸ್
29-01-24 10:27 pm HK News Desk ದೇಶ - ವಿದೇಶ
ಕೊಲ್ಕತ್ತಾ, ಜ.29: ಇನ್ನೊಂದೇ ವಾರದಲ್ಲಿ ಸಿಎಎ ಕಾಯ್ದೆ ದೇಶದಲ್ಲಿ ಜಾರಿಗೆ ಬರಲಿದೆ ಎಂದು ಕೇಂದ್ರ ಹಡಗು ಯಾನ ರಾಜ್ಯ ಸಚಿವ ಶಂತನು ಠಾಕೂರ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಸೌತ್ ಪರಗಣ ಜಿಲ್ಲೆಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಶಂತನು ಠಾಕೂರ್ ಈ ಮಾತು ಹೇಳಿದ್ದಾರೆ. ಅಲ್ಲದೆ, ಸುದ್ದಿಗಾರರು ಕೇಳಿದ ಪ್ರಶ್ನೆಗೂ ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ಸಿಎಎ ಕಾನೂನು ದೇಶದಲ್ಲಿ ಕೇವಲ ಏಳು ದಿನಗಳೊಳಗೆ ಜಾರಿಗೆ ಬರಲಿದೆ. ಇದು ನಾನು ನೀಡುತ್ತಿರುವ ಗ್ಯಾರಂಟಿ ಎಂದಿದ್ದಾರೆ.
ಕಳೆದ ನವೆಂಬರ್ ತಿಂಗಳಲ್ಲಿ ಕೇಂದ್ರ ಗೃಹ ಸಚಿವಾಲಯದ ಸಹಾಯಕ ಸಚಿವ ಅಜಯ ಕುಮಾರ್ ಮಿಶ್ರಾ, ಇದೇ ಮಾರ್ಚ್ ಒಳಗೆ ಸಿಎಎ ಕಾಯ್ದೆ ಜಾರಿಗೆ ಬರಲಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಸಿಎಎ ಕಾಯ್ದೆಯನ್ನು ಜಾರಿಗೆ ತರುವ ಉದ್ದೇಶ ಹೊಂದಿದೆ ಎನ್ನೋದು ಖಚಿತವಾಗಿತ್ತು. 2019ರಲ್ಲಿ ಕೇಂದ್ರ ಸರಕಾರ ಸಿಟಿಜನ್ ಶಿಪ್ ಅಮೆಂಡ್ ಮೆಂಟ್ ಏಕ್ಟ್ (ಸಿಎಎ) ಅನ್ನು ತಿದ್ದುಪಡಿ ತಂದಿತ್ತು. 2014ಕ್ಕೂ ಹಿಂದೆ ನೆರೆ ರಾಷ್ಟ್ರಗಳಿಂದ ಭಾರತಕ್ಕೆ ಬಂದಿರುವ ಅಲ್ಲಿನ ಅಲ್ಪಸಂಖ್ಯಾತರಿಗೆ ದೇಶದ ನಾಗರಿಕತ್ವ ನೀಡಲು ಕಾಯ್ದೆ ಅವಕಾಶ ನೀಡುತ್ತದೆ.
ಪಶ್ಚಿಮ ಬಂಗಾಳದ ಗಡಿಭಾಗ ಬೊಂಗಾವ್ ಲೋಕಸಭೆ ಕ್ಷೇತ್ರದ ಸದಸ್ಯರಾಗಿರುವ ಶಂತನು ಠಾಕೂರ್ ಅವರಿಗೆ ಸಿಎಎ ಕಾಯ್ದೆ ಜಾರಿಗೊಳಿಸುವ ಅನಿವಾರ್ಯತೆಯಿದೆ. 2019ರಲ್ಲಿ ಸಿಎಎ ಕಾಯ್ದೆ ಜಾರಿಗೆ ತರುತ್ತೇವೆ ಎಂದೇ ಅವರು ಚುನಾವಣೆ ಎದುರಿಸಿದ್ದರು. ಈ ಜಿಲ್ಲೆಯಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದಿರುವ ಮಥುವಾ ಬುಡಕಟ್ಟು ಸಮುದಾಯದವರಿದ್ದು 1950ರಿಂದಲೂ ಬಾಂಗ್ಲಾದಿಂದ ಭಾರತಕ್ಕೆ ಬಂದು ನೆಲೆಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಗೂ ಮುನ್ನ ಕಾಯ್ದೆ ಜಾರಿಗೊಳಿಸುವುದಾಗಿ ಶಂತನು ಠಾಕೂರ್ ಹೇಳಿದ್ದಾರೆ. ಆದರೆ ಈ ಕಾಯ್ದೆ ಜಾರಿಯಿಂದ ಮುಸ್ಲಿಮರಿಗೆ ಅನ್ಯಾಯ ಆಗಲಿದೆ ಎಂದು ಕಾಂಗ್ರೆಸ್ ಬಿಂಬಿಸುತ್ತಿದ್ದು ಕಳೆದ ಬಾರಿ ದೇಶಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿತ್ತು.
Over the past few days Union Minister of State for Shipping, Santanu Thakur has said that the Citizenship (Amendment) Act (CAA) would be implemented in the country within a week. Mr. Santanu said this while addressing a rally at South 24 Paraganas district on January 28. He is also BJP MP from Bongaon.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm