ಬ್ರೇಕಿಂಗ್ ನ್ಯೂಸ್
30-01-24 03:28 pm HK News Desk ದೇಶ - ವಿದೇಶ
ಲಕ್ನೋ, ಜ.30: ಜ್ಞಾನವಾಪಿ ಮಸೀದಿ ಕುರಿತು ಎಎಸ್ಐ ವರದಿ ತೀವ್ರ ಚರ್ಚೆಗೆ ಗ್ರಾಸವಾಗಿರುವಾಗಲೇ ಉತ್ತರ ಪ್ರದೇಶದ ಸಹರಾನ್‌ಪುರದ ಜಮಿಯತ್ ಹಿಮಾಯತುಲ್ ಇಸ್ಲಾಂ ಅಧ್ಯಕ್ಷ ಮತ್ತು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಮುಸ್ಲಿಮರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಜ್ಞಾನವಾಪಿ ಕುರಿತಂತೆ ನ್ಯಾಯಾಲಯದ ಆದೇಶದ ಮೇರೆಗೆ ಎಎಸ್‌ಐ ಸಮೀಕ್ಷೆ ನಡೆದಿದೆ. ಅದರ ವರದಿಯೂ ಬಂದಿದೆ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು. ದೇಶದಲ್ಲಿ ಹಿಂದೂಹ ಮತ್ತು ಮುಸ್ಲಿಮರು ಸಾಮರಸ್ಯದಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.
ಜ್ಞಾನವಾಪಿ ವಿವಾದದ ಕುರಿತಂತೆ ಹಿಂದೂಗಳು ಹಾಗೂ ಮುಸ್ಲಿಂ ಸಂಘಟನೆಗಳು ಎರಡೂ ನ್ಯಾಯಾಲಯದ ಮೊರೆ ಹೋಗಿದ್ದವು. ಹೀಗಾಗಿ ವೈಜ್ಞಾನಿಕ ಸಮೀಕ್ಷೆಗೆ ನ್ಯಾಯಾಲಯ ಆದೇಶಿಸಿತ್ತು. ಕೋರ್ಟ್ ನಿರ್ದೇಶನದಂತೆ ಜ್ಞಾನವಾಪಿಯಲ್ಲಿ ಎಎಸ್‌ಐ ಸಮೀಕ್ಷೆ ನಡೆದಿದೆ. ಇದೀಗ ಸಮೀಕ್ಷಾ ವರದಿಯೂ ಬಹಿರಂಗಗೊಂಡಿದೆ. ಈಗ ಮುಸ್ಲಿಮರು ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಹೇಳಿದ್ದಾರೆ.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಎಲ್ಲಾ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಕೆಲಸ ಮಾಡಬಾರದು ಎಂದಿದ್ದಾರೆ. ಅದೇ ವಿಷಯ ಮುಸ್ಲಿಮರಿಗೂ ಅನ್ವಯಿಸುತ್ತದೆ. ಯಾವುದೇ ಧಾರ್ಮಿಕ ಸ್ಥಳದಲ್ಲಿ ವಿವಾದ ಉಂಟಾದರೆ ಹಿಂದೂ ಮುಸಲ್ಮಾನರು ಒಗ್ಗೂಡಿ, ಸಾಮರಸ್ಯದಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಪರಸ್ಪರ ಚರ್ಚೆಯ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳಿ ಎಂದವರು ಸಲಹೆ ನೀಡಿದ್ದಾರೆ.
ನ್ಯಾಯಾಲಯ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಶ್ನಿಸುವವರು ಈ ದೇಶವನ್ನು ವಿಘಟಿಸಬೇಕೆಂದು ಪರೋಕ್ಷವಾಗಿ ಹೇಳುತ್ತಿದ್ದಾರೆ. ಅಫ್ಘಾನಿಸ್ತಾನ ಮೊದಲು ಬೇರ್ಪಡಲು ತುಕ್ಡೆ ತುಕ್ಡೆ ಗ್ಯಾಂಗ್ ಕಾರಣವಾಗಿತ್ತು. ನಂತರ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಕೂಡ ಬೇರ್ಪಟ್ಟವು. ಈಗ ಇದೇ ಜನರು ಈ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಅಂತ ಕಳವಳ ವ್ಯಕ್ತಪಡಿಸಿದರು.
Even as the ASI report on the Gyanvapi mosque has sparked a debate, Qari Abrar Jamal, president of Jamiat Himayatul Islam in Saharanpur, Uttar Pradesh, has come up with a piece of advice for Muslims.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm