ಬ್ರೇಕಿಂಗ್ ನ್ಯೂಸ್
14-02-24 03:16 pm HK News Desk ದೇಶ - ವಿದೇಶ
ಜೈಪುರ, ಫೆ 14: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ಸ್ಫರ್ಧಿಸಲಿದ್ದು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ಜೈಪುರಕ್ಕೆ ಬಂದಿಳಿದ ಅವರನ್ನು ರಾಜಸ್ಥಾನದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಬರಮಾಡಿಕೊಂಡರು.
ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.
ಫೆಬ್ರುವರಿ 27ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸದ್ಯ, ರಾಯ್ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
2019ರ ಸಾರ್ವತ್ರಿಕ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.
Former Congress president Sonia Gandhi on Wednesday filed her nomination papers for the upcoming Rajya Sabha polls from Rajasthan.Her children Rahul Gandhi and Priyanka Gandhi, former chief minister Ashok Gehlot, PCC chief Govind Singh Dotasra, leader of opposition Tikaram Jully were present at the time of the nomination filing in the assembly building.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 08:53 pm
Mangalore Correspondent
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm