ಬ್ರೇಕಿಂಗ್ ನ್ಯೂಸ್
07-08-20 07:25 am Headline Karnataka News Network ದೇಶ - ವಿದೇಶ
ನವದೆಹಲಿ (ಆ.7): ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ನಡೆದ ಉನ್ನತ ಶಿಕ್ಷಣದಲ್ಲಿ ಮಹಾ ಪರಿವರ್ತನೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮಕ್ಕಳು ಮಾತೃಭಾಷೆಯಲ್ಲಿ ಬಹುಬೇಗ ಕಲಿಯುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಾಗೂ ಯುಜಿಸಿ ಒಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ವೇಳೆ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ವಿಚಾರವಾಗಿ ಮಾತನಾಡಿದ್ದಾರೆ. ಮಕ್ಕಳು ತಮ್ಮ ಮಾತೃ ಭಾಷೆಯಲ್ಲಿ ವಿಚಾರಗಳನ್ನು ಬೇಗ ಕಲಿಯುತ್ತಾರೆ. ಹೀಗಾಗಿ, ಐದನೇ ತರಗತಿವರೆಗೆ ಮಕ್ಕಳ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ನಾವು ಸಮ್ಮತಿಸಿದ್ದೇವೆ, ಎಂದು ಮೋದಿ ಹೇಳಿದರು.
ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಮೋದಿ, ಕಳೆದ ಸಾಕಷ್ಟು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಹೀಗಾಗಿ ಶಿಕ್ಷಣ ನೀತಿ ಅತ್ಯಗತ್ಯವಾಗಿತ್ತು. ಎನ್ಇಪಿ 2020 ಹೊಸ ವ್ಯವಸ್ಥೆಗೆ ತಕ್ಕಂತೆಯೇ ಇರುತ್ತದೆ. ನಾಲ್ಕು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಪ್ಪಿಗೆ ಸೂಚಿಸಿದ್ದೇವೆ, ಎಂದು ಮೋದಿ ಹೇಳಿದ್ದಾರೆ.
ಜುಲೈ 29ರಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ. ಹೊಸ ಕಾನೂನಿನ ಅಡಿಯಲ್ಲಿ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳು ನಮ್ಮ ದೇಶದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm