ಬ್ರೇಕಿಂಗ್ ನ್ಯೂಸ್
18-02-24 01:27 pm HK News Desk ದೇಶ - ವಿದೇಶ
ನವದೆಹಲಿ, ಫೆ.18: ಉತ್ತರ ಭಾರತದಲ್ಲಿ ನೆಲೆಸಿದ್ದ ಜೈನ ಸನ್ಯಾಸಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಸಲ್ಲೇಖನ ವ್ರತ ಆಚರಿಸಿ ದೇಹತ್ಯಾಗ ಮಾಡಿದ್ದಾರೆ. ಛತ್ತೀಸ್ಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಅವರು ಕೊನೆಯ ದಿನಗಳನ್ನು ಕಳೆದಿದ್ದಾರೆ.
ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಆಚಾರ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನಗಳಿಂದ ಆಹಾರ ಹಾಗೂ ನೀರನ್ನು ತ್ಯಜಿಸಿದ್ದ ಅವರು ಆಮೂಲಕ ಜೀವಾಂತ್ಯ ಮಾಡಿದ್ದಾರೆ.
ಆಚಾರ್ಯರು ಕೊನೆಯ ಉಸಿರಿನ ವರೆಗೂ ಜಾಗೃತ ಸ್ಥಿತಿಯಲ್ಲಿದ್ದು ಮಂತ್ರಗಳನ್ನು ಪಠಿಸುತ್ತಲೇ ಇಹಲೋಕ ತ್ಯಜಿಸಿದ್ದಾರೆ. ಮುನಿಗಳ ಅಂತ್ಯಸಂಸ್ಕಾರವು ಫೆಬ್ರವರಿ 18ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ಜೈನ ಧರ್ಮದ ವಿಧಿಗಳ ಪ್ರಕಾರ ನಡೆಯಲಿದೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದಲ್ಲಿ 10 ಅಕ್ಟೋಬರ್ 1946 ರಂದು ಜನಿಸಿದ್ದ ಆಚಾರ್ಯರು ರಾಜಸ್ಥಾನದಲ್ಲಿ ಮುನಿ ದೀಕ್ಷೆ ಪಡೆದಿದ್ದರು. 30 ಜೂನ್ 1968 ರಂದು ರಾಜಸ್ಥಾನದ ಅಜ್ಮೀರ್ ನಗರದಲ್ಲಿ ಗುರು ಆಚಾರ್ಯ ಶ್ರೀ ಜ್ಞಾನಸಾಗರ್ ಮಹಾರಾಜ್ ಅವರಿಂದ ಮುನಿದೀಕ್ಷೆಯನ್ನು ಪಡೆದಿದ್ದರು.
ಆಚಾರ್ಯರು 1975ರ ಸುಮಾರಿಗೆ ಬುಂದೇಲಖಂಡಕ್ಕೆ ಬಂದು ನೆಲೆಸಿದ್ದರು. ತಮ್ಮ ಹೆಚ್ಚಿನ ಸಮಯವನ್ನು ಬುಂದೇಲ್ಖಂಡದಲ್ಲಿ ಕಳೆದಿದ್ದು ಆಚಾರ್ಯರು ತಮ್ಮ ಜೀವನದಲ್ಲಿ ಸುಮಾರು 350 ಮಂದಿಗೆ ದೀಕ್ಷೆ ನೀಡಿದ್ದಾರೆ. ಮುನಿಗಳು ಹಿಂದಿ, ಮರಾಠಿ ಮತ್ತು ಕನ್ನಡದಲ್ಲಿ ಪರಿಣತರಾಗಿದ್ದರು. ಹಿಂದಿ ಹಾಗೂ ಸಂಸ್ಕೃತದಲ್ಲಿ ಸಾಕಷ್ಟು ಲೇಖನ ಬರೆದಿದ್ದಾರೆ. ಆಚಾರ್ಯರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
Renowned Jain seer Acharya Vidyasagar Maharaj breathed his last on Sunday at Chandragiri Teerth in Dongargarh in Chhattisgarh's Rajnandgaon district after undertaking 'sallekhna'. Sallekhna is a Jain religious practice involving voluntary fasting unto death for spiritual purification, a statement from the teerth said.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm