ಬ್ರೇಕಿಂಗ್ ನ್ಯೂಸ್
21-02-24 11:47 am HK News Desk ದೇಶ - ವಿದೇಶ
ನವದೆಹಲಿ, ಫೆ 21: ಎಂಎಸ್ಪಿ ಬೇಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಬ್ಬಾಳಿಕೆ ಮಾಡಬೇಡಿ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಪ್ರಧಾನಿ ಮೋದಿಗೆ ಬುಧವಾರ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು ರೈತರೇ ಮೋದಿಯನ್ನ ದೇಶದ ಪ್ರಧಾನಿಯನ್ನಾಗಿ ಮಾಡಿದ್ದು, ನಮ್ಮ ಮೇಲೆ ದಬ್ಬಾಳಿಕೆ ನಡೆಸಬೇಡಿ, ಬಿಜೆಪಿ ನೇತೃತ್ವದ ಕೇಂದ್ರವನ್ನು ದೇಶ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.
ಬೃಹತ್ ಪ್ರತಿಭಟನೆಯನ್ನು ಸಂಯೋಜಿಸುತ್ತಿರುವ ಪಂಧೇರ್, ತಮ್ಮ ಮೆರವಣಿಗೆಯನ್ನು ತಡೆಯಲು ಹರಿಯಾಣದ ಹಳ್ಳಿಗಳಲ್ಲಿ ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂತಹ ಸರ್ಕಾರವನ್ನು ದೇಶ ಕ್ಷಮಿಸುವುದಿಲ್ಲ…ಹರಿಯಾಣದ ಹಳ್ಳಿಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಿ ನಮ್ಮ ಪ್ರತಿಭಟನೆಯನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದೆ. ನಾವೇನು ಅಪರಾಧ ಮಾಡಿದ್ದೇವೆ? ನಿಮ್ಮನ್ನು ಪ್ರಧಾನಿಯನ್ನಾಗಿ ಮಾಡಿದ್ದು ನಾವೇ.. ಈಗ ನಮ್ಮ ಮೇಲೆ ಸೇನಾ ಪಡೆಗಳನ್ನು ಕಳುಹಿಸಿ ದಬ್ಬಾಳಿಕೆ ಮಾಡುತಿದ್ದೀರಿ. ನಾವು ಶಾಂತ ರೀತಿಯಲ್ಲಿ ದೆಹಲಿಯತ್ತ ತೆರಳಿ ಪ್ರತಿಭಟನೆ ನಡೆಸುವ ನಿರ್ಧಾರವನ್ನು ನಾವು ಮಾಡಲು ನಿಂತಿದ್ದೇವೆ ಅದನ್ನು ನೀವು ತಡೆಯಲು ಯತ್ನಿಸುತ್ತಿದ್ದೀರಿ ಎಂದು ಕಿಡಿಕಾರಿದರು.
ಕೇಂದ್ರ ನಡೆಸಿದ ಹಲವು ಸಭೆಗಳಲ್ಲಿ ನಾವು ಭಾಗವಹಿಸಿದ್ದೇವೆ, ಪ್ರತಿಯೊಂದು ಅಂಶವನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಇದರ ಬಗ್ಗೆ ಈಗ ಕೇಂದ್ರ ಸರ್ಕಾರವು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ನಾವು ಶಾಂತರಾಗಿರುತ್ತೇವೆ, ಪ್ರಧಾನಿ ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. 1.5-2 ಲಕ್ಷ ಕೋಟಿ ದೊಡ್ಡ ಮೊತ್ತವಲ್ಲ...ಈ ಅಡೆತಡೆಗಳನ್ನು ತೆಗೆದು ದೆಹಲಿಯತ್ತ ಸಾಗಲು ಅವಕಾಶ ನೀಡಬೇಕು ಎಂದು ಹೇಳಿದರು.
ನಿನ್ನೆ, ಪಂಜಾಬ್-ಹರಿಯಾಣ ಶಂಭು ಗಡಿಯಿಂದ ರೈತರು ತಮ್ಮ ‘ದೆಹಲಿ ಚಲೋ’ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಸಂಧು ಘೋಷಿಸಿದರು. ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಐದು ವರ್ಷಗಳ ಕಾಲ ಸರ್ಕಾರಿ ಸಂಸ್ಥೆಗಳಿಂದ ಎಂಎಸ್ಪಿ ದರದಲ್ಲಿ ಖರೀದಿಸುವ ಕೇಂದ್ರದ ಪ್ರಸ್ತಾವನೆಯನ್ನು ರೈತರು ತಿರಸ್ಕರಿಸಿದ ಗಂಟೆಗಳ ನಂತರ ಅವರು ಈ ಹೇಳಿಕೆಯನ್ನು ನೀಡಿದರು
ಈಗಾಗಲೇ ಶಂಭು ಗಡಿಯಲ್ಲಿ 1,170 ಟ್ರ್ಯಾಕ್ಟರ್ಗಳು, ಖನೌರಿುಲ್ಲಿ 870 ಟ್ರ್ಯಾಕ್ಟರ್ಗಳನ್ನು ನಿಯೋಜಿಸಲಾಗಿದೆ.
Thousands of farmers from Punjab will resume their 'Delhi Chalo' march today, to press for their demand of MSP support for all crops. The protesting farmers, who are currently camping at the Haryana-Punjab Shambhu border, announced resumption of the agitation on Tuesday after the fourth round of talks with the central government failed.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm