ಬ್ರೇಕಿಂಗ್ ನ್ಯೂಸ್
25-02-24 01:26 pm HK News Desk ದೇಶ - ವಿದೇಶ
ನವದೆಹಲಿ, ಫೆ.25: ಲೋಕಸಭೆ ಚುನಾವಣೆಗೆ ಮಾರ್ಚ್ ಮೊದಲ ವಾರದಲ್ಲಿ ವೇಳಾಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಅದಕ್ಕೂ ಮೊದಲೇ ಬಿಜೆಪಿ ನೂರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಬಿಜೆಪಿ ಮೊದಲ ಫೆ.29ರಂದು ಪ್ರಕಟಗೊಳ್ಳಲಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಹುತೇಕ ಹಾಲಿ ಅಭ್ಯರ್ಥಿಗಳ ಹೆಸರು ಇರಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಫೆ.29ರಂದು ಸಭೆ ಸೇರಲಿದ್ದು ಅಂದೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. 543 ಸಂಸತ್ ಸ್ಥಾನಗಳಲ್ಲಿ 370 ಸೀಟುಗಳನ್ನು ಬಿಜೆಪಿ ಒಂದೇ ಗೆಲ್ಲುವ ಗುರಿ ಇಟ್ಟುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಗೊಂಡಿದ್ದು ಅಲ್ಲಿಂದಲೇ ಹ್ಯಾಟ್ರಿಕ್ ಜಯ ಸಾಧಿಸಲು ಬಯಸಿದ್ದಾರೆ. 2014ರ ಚುನಾವಣೆಯಲ್ಲಿ 3.37 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. 2019ರ ಚುನಾವಣೆಯಲ್ಲಿ 4.8 ಲಕ್ಷಕ್ಕೆ ಗೆಲುವಿನ ಅಂತರ ಏರಿಕೆಯಾಗಿತ್ತು.
ಕೇರಳದಲ್ಲಿ ಲೋಕಸಭೆ ಸೀಟು ಗೆಲ್ಲಲು ಭಾರೀ ಪ್ರಯತ್ನ ನಡೆಸಿದ್ದು ಕೆಲವು ಹಾಲಿ ಸಚಿವರನ್ನು ಚುನಾವಣೆ ಕಣಕ್ಕಿಳಿಸಲು ಮುಂದಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕ ಮತ್ತು ಕೇರಳದ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆಯಾಗಲಿದೆ. ಕೇರಳದಲ್ಲಿ ಬಿಜೆಪಿ ರಾಜ್ಯವ್ಯಾಪಿ ಪಾದಯಾತ್ರೆ ನಡೆಸುತ್ತಿದ್ದು, ಫೆ 27ರಂದು ಅಂತ್ಯಗೊಳ್ಳಲಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ. ಒಂದೆರಡು ದಿನಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಂಭವವಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದರಲ್ಲಿ ನಟಿ ಶೋಭನಾ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ನಟ ಸುರೇಶ್ ಗೋಪಿ, ಪಿಸಿ ಜಾರ್ಜ್ ಅಥವಾ ಅವರ ಮಗ ಶಾನ್ ಜಾರ್ಜ್, ಗೋವಾ ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೈ ಮುಂತಾದವರ ಹೆಸರು ಕೇಳಿಬರುತ್ತಿದೆ.
The Bharatiya Janata Party (BJP) is gearing up for the upcoming Lok Sabha elections, with plans to announce over 150 candidates following the first meeting of its central election committee scheduled for February 29.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm