ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.
ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm