ಬ್ರೇಕಿಂಗ್ ನ್ಯೂಸ್
03-04-24 01:06 pm HK News Desk ದೇಶ - ವಿದೇಶ
ಚೆನ್ನೈ, ಏ 03: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಅಪರಾಧಿಗಳಾದ ಮುರುಗನ್, ರಾಬರ್ಟ್ ಮತ್ತು ಜಯಕುಮಾರ್ ಸೇರಿದಂತೆ ಮೂವರನ್ನು ಬುಧವಾರ ಚೆನ್ನೈ ವಿಮಾನ ನಿಲ್ದಾಣದಿಂದ ಶ್ರೀಲಂಕಾಕ್ಕೆ ಗಡಿಪಾರು ಮಾಡಲಾಗಿದೆ.
ಜೈಲಿನಲ್ಲಿ ಅಪರಾಧಿಗಳ ಉತ್ತಮ ನಡವಳಿಕೆಯನ್ನು ಪರಿಗಣಿಸಿ ಮೂವರನ್ನು ಬಿಡುಗಡೆಗೊಳಿಸಲು ತಮಿಳುನಾಡು ಸರ್ಕಾರ ಶಿಫಾರಸ್ಸು ಮಾಡಿದ್ದು, ಅದರಂತೆ 2022ರ ನವೆಂಬರ್ ನಲ್ಲಿ ಸುಪ್ರೀಂಕೋರ್ಟ್, ರಾಜೀವ್ ಗಾಂಧಿ ಹಂತಕರಾದ ಮುರುಗನ್, ರಾಬರ್ಟ್ ಪಾಯಸ್, ಜಯಕುಮಾರ್ ಸೇರಿದಂತೆ ಆರು ಮಂದಿಯನ್ನು ಬಿಡುಗಡೆಗೊಳಿಸಲು ಆದೇಶ ನೀಡಿತ್ತು.
ಶ್ರೀಲಂಕಾ ಪ್ರಜೆಗಳಾದ ಮೂವರನ್ನು ತಿರುಚಿರಾಪಲ್ಲಿಯ ವಿಶೇಷ ಶಿಬಿರದಲ್ಲಿ ಬಿಗಿ ಬಂದೋಬಸ್ತ್ ನಲ್ಲಿ ಇರಿಸಲಾಗಿತ್ತು. ಇಂದು ಬೆಳಗ್ಗೆ ಪೊಲೀಸ್ ಅಧಿಕಾರಿಗಳ ತಂಡ ಮೂವರನ್ನು ಚೆನ್ನೈ ವಿಮಾನ ನಿಲ್ದಾಣಕ್ಕೆ ಕರೆತಂದು, ಶ್ರೀಲಂಕಾಕ್ಕೆ ಗಡಿಪಾರು ಮಾಡಲಾಗಿದೆ
ಶ್ರೀಲಂಕಾ ಪ್ರಜೆಯಾದ ಮುರುಗನ್ ಆರೋಪಿ ನಳಿನಿಯನ್ನು ವಿವಾಹವಾಗಿದ್ದ. ಇಂದು ಬೆಳಗ್ಗೆ ನಳಿನಿ, ಪತಿ ಮುರುಗನ್ ಜತೆ ವಿಮಾನ ನಿಲ್ದಾಣದಲ್ಲಿ ಸಾಥ್ ನೀಡಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗಿದೆ.
ಈ ಪ್ರಕರಣದಲ್ಲಿ ದಿ.ರಾಜೀವ್ ಗಾಂಧಿ ಪತ್ನಿ ಸೋನಿಯಾ ಗಾಂಧಿ ಮಧ್ಯಪ್ರವೇಶಿಸಿ, ಗರ್ಭಿಣಿಯಾಗಿದ್ದ ನಳಿನಿಯ ಗಲ್ಲುಶಿಕ್ಷೆಯನ್ನು ರದ್ದುಪಡಿಸಿ ಜೀವಾವಧಿ ಶಿಕ್ಷೆ ಕೊಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಜೀವದಾನ ಪಡೆದ ನಳಿನಿ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈಗ ನಳಿನಿ ಪುತ್ರಿ ಯುನೈಟೆಡ್ ಕಿಂಗ್ ಡಮ್ ನಲ್ಲಿ ವೈದ್ಯೆಯಾಗಿದ್ದಾಳೆ. ಸುಪ್ರೀಂಕೋರ್ಟ್ ಆದೇಶದಂತೆ ಪೆರಾರಿವಳನ್, ನಳಿನಿ ಮತ್ತು ರವಿಚಂದ್ರನ್ ಸೇರಿದಂತೆ ಮೂವರನ್ನು ಜೈಲಿನಿಂದ ಬಿಡುಗಡೆಗೊಂಡಿದ್ದರು. 1991ರಲ್ಲಿ ಶ್ರೀಪೆರುಂಬುದೂರ್ ಸಮೀಪ ನಿಷೇಧಿತ ಎಲ್ ಟಿಟಿಇ ಮಹಿಳಾ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಳ್ಳುವ ಮೂಲಕ ರಾಜೀವ್ ಗಾಂಧಿಯನ್ನು ಹತ್ಯೆಗೈದಿದ್ದರು. ಈ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿ ಗಲ್ಲುಶಿಕ್ಷೆ ವಿಧಿಸಲಾಗಿತ್ತು. ಬಳಿಕ ಅವರ ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.
Three men who had been convicted for their role in the assassination of former Prime Minister Rajiv Gandhi left for Colombo Wednesday morning. Murugan, Robert Payas, and Jayakumar were among six freed in November 2022 by the Supreme Court, which had said they showed "satisfactory behaviour" while in jail and also noted the Tamil Nadu government had recommended their release.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 11:32 am
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm