ಬ್ರೇಕಿಂಗ್ ನ್ಯೂಸ್
09-04-24 03:27 pm HK News Desk ದೇಶ - ವಿದೇಶ
ನವದೆಹಲಿ, ಎ.9: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಒಡೆತನದ ಪ್ರತಿ ಚರಾಸ್ತಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಅರುಣಾಚಲ ಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಕರಿಖೋ ಕ್ರಿ ಅವರ 2019ರ ಚುನಾವಣಾ ಆಯ್ಕೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಅಭ್ಯರ್ಥಿಯ ಪ್ರತಿ ಆಸ್ತಿಯ ಬಗ್ಗೆಯೂ ತಿಳಿದುಕೊಳ್ಳಲು ಮತದಾರರಿಗೆ ಸಂಪೂರ್ಣ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಚುನಾವಣೆ ಸ್ಪರ್ಧಿಸುವ ಅಭ್ಯರ್ಥಿ ತನ್ನ ಉಮೇದುವಾರಿಕೆಗೆ ಸಂಬಂಧಿಸದ ವಿಷಯಗಳ ಬಗ್ಗೆ ಗೌಪ್ಯತೆ ಇರಿಸಿಕೊಳ್ಳುವ ಹಕ್ಕನ್ನು ಹೊಂದಿರುತ್ತಾನೆ ಎಂದು ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ವಿಭಾಗೀಯ ಪೀಠವು ಶಾಸಕ ಕರಿಖೋ ಕ್ರಿ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿದ್ದ ಅಸ್ಸಾಂ ರಾಜ್ಯುಲದ ಗುವಾಹಟಿ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿತು.
ನಾಮಪತ್ರ ಸಲ್ಲಿಸುವಾಗ ಶಾಸಕರು ತಮ್ಮ ಪತ್ನಿ ಮತ್ತು ಮಗನ ಒಡೆತನದ ಮೂರು ವಾಹನಗಳನ್ನು ಬಹಿರಂಗಪಡಿಸದೆ ಅನಾವಶ್ಯಕ ಪ್ರಭಾವ ಬೀರಿದ್ದಾರೆ ಎಂದು ಕರಿಖೋ ಕ್ರಿ ವಿರುದ್ಧ ಪ್ರತಿಸ್ಪರ್ಧಿ ವ್ಯಕ್ತಿ ಆಕ್ಷೇಪ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ನಾಮಪತ್ರ ಸಲ್ಲಿಸುವ ಮೊದಲೇ ವಾಹನಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಅಥವಾ ಮಾರಾಟ ಮಾಡಲಾಗಿದೆ ಎಂಬುದನ್ನು ಗಮನಿಸಿದ್ದು, ವಾಹನಗಳು ಇನ್ನೂ ಕ್ರಿ ಅವರ ಕುಟುಂಬದ ಒಡೆತನದಲ್ಲಿದೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟಿನಲ್ಲಿ ವಾದಿಸಲಾಗಿದೆ.
ಮತದಾರರು ತಿಳಿದುಕೊಳ್ಳುವ ಹಕ್ಕನ್ನು ಹೊಂದಿರುವುದರಿಂದ ಕ್ರಿ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ಬಹಿರಂಗಪಡಿಸಬೇಕು ಎಂಬ ಅರ್ಜಿದಾರರ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಎಲ್ಲವನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಹೇಳಿದೆ.
Holding that candidates contesting elections are not required to disclose each and every moveable property owned by them or their dependents unless they are of substantial value or reflect a luxurious lifestyle, the Supreme Court on Tuesday (April 09) upheld the 2019 election of the Independent MLA Karikho Kri from the Tezu Assembly constituency in Arunachal Pradesh.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm