ಬ್ರೇಕಿಂಗ್ ನ್ಯೂಸ್
02-12-20 11:15 am Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಡಿ.2 : ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ ಎಂಟು ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಾವಿಗೆ ಕಾರಣವಾದ ಅಂಶಗಳ ಪತ್ತೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಿದ್ದಾರೆ.
ಆಸ್ಪತ್ರೆಯ ಅಸ್ವಸ್ಥ ನವಜಾತ ಶಿಶು ಆರೈಕೆ ಘಟಕ ಮತ್ತು ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಈ ಸಾವುಗಳು ಸಂಭವಿಸಿವೆ. ಮೃತಪಟ್ಟ ಮಕ್ಕಳು ಬುಡಕಟ್ಟು ಜನಾಂಗದವರೇ ಅಧಿಕ ಇರುವ ಶಾಡೋಲ್, ಉಮರಿಯಾ ಮತ್ತು ಅನುಪ್ಪೂರ್ ಜಿಲ್ಲೆಗೆ ಸೇರಿದವರು.

ಅನಿಯಂತ್ರಿತ ನ್ಯುಮೋನಿಯಾ ಮತ್ತು ಉಸಿರಾಟದ ಸಂಕೀರ್ಣತೆಗಳಿಂದ ಬಹುತೇಕ ಮಕ್ಕಳು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಆರೋಗ್ಯ ಸಚಿವ ಡಾ.ಪ್ರಭುರಾಮ್ ಚೌಧರಿ ಹೇಳಿದ್ದಾರೆ.
"ಮುಖ್ಯಮಂತ್ರಿ ಆದೇಶದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುಹಮ್ಮದ್ ಸುಲೈಮಾನ್ ಅವರಿಗೆ ಶಾಡೋಲ್ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ ಎಂದು ಪತ್ತೆ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಗತ್ಯವಿದ್ದಲ್ಲಿ ಜಬಲ್ಪುರದಿಂದ ಶಾಡೋಲ್ಗೆ ತಜ್ಞ ವೈದ್ಯರನ್ನು ಕಳುಹಿಸುವಂತೆಯೂ ಅವರು ಸಲಹೆ ಮಾಡಿದ್ದಾರೆ. ಕಳೆದ ಜನವರಿಯಲ್ಲಿ ಆರು ದಿನದಿಂದ ಆರು ತಿಂಗಳು ಪ್ರಾಯದ ಆರು ಬುಡಕಟ್ಟು ಮಕ್ಕಳು ಇದೇ ಆಸ್ಪತ್ರೆಯಲ್ಲಿ 15 ಗಂಟೆಯೊಳಗೆ ಮೃತಪಟ್ಟಿದ್ದವು.
As many as eight infants died during treatment at the district hospital at Shahdol in Madhya Pradesh in the last four days, prompting the state government to launch an inquiry, officials said on Tuesday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm