ಬ್ರೇಕಿಂಗ್ ನ್ಯೂಸ್
18-05-24 10:18 pm HK News Desk ದೇಶ - ವಿದೇಶ
ನವದೆಹಲಿ, ಮೇ 18: ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಸ್ಥಾನವನ್ನು ಅತ್ಯುತ್ತಮ ರೀತಿಯಲ್ಲಿ ನಿಭಾಯಿಸಲಿದ್ದಾರೆ, ಯಾಕಂದ್ರೆ ಅವರಿಗೆ ಈ ದೇಶದ ಜನರ ನಾಡಿಮಿಡಿತ ಗೊತ್ತಿದೆ. ಜನರನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಸೋದರಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.
ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಪ್ರಿಯಾಂಕ ಗಾಂಧಿಗೆ, ರಾಹುಲ್ ಪ್ರಧಾನ ಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆ ಬಂತು. ಇದಕ್ಕುತ್ತರಿಸಿದ ಪ್ರಿಯಾಂಕ, ಯಾಕೆ ರಾಹುಲ್ ಪಿಎಂ ಆಗಬಾರದು. ಅವರೊಬ್ಬ ಅತ್ಯುತ್ತಮ ಪ್ರಧಾನ ಮಂತ್ರಿ ಆಗಲಿದ್ದಾರೆ. ಈ ದೇಶದ ಜನರ ನಾಡಿ ಮಿಡಿತವನ್ನು ರಾಹುಲ್ ಗಾಂಧಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ ಎಂದು ಹೇಳಿದರು.
ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ. ಮೋದಿ ಈ ಕುರಿತು ಡಿಬೇಟ್ ಗೆ ಬಂದರೂ ಅವರಿಗೆ ಹಿಂದು ಧರ್ಮದ ಬಗ್ಗೆ ರಾಹುಲ್ ಜೊತೆಗೆ ಮಾತನಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಯಾರಿಗೂ ಹೆದರುವುದಿಲ್ಲ, ಸತ್ಯವನ್ನು ಹೇಳುವುದಕ್ಕೆ ಹಿಂಜರಿಕೆ ಇಲ್ಲ. ಇವರು ಸತ್ಯ ಹೇಳುತ್ತಾರೆ ಎಂಬುದನ್ನು ದೇಶ ಅರಿತುಕೊಂಡಿದೆ ಎಂದರು. ಬೇರಾವುದೇ ನಾಯಕ ಈ ಪರಿಯಾಗಿ ಟೀಕೆಯನ್ನು ಎದುರಿಸಿರಲಿಕ್ಕಿಲ್ಲ. ಬಿಜೆಪಿ ನಾಯಕರು ಸೇರಿದಂತೆ ಮೂಲೆ ಮೂಲೆಯಿಂದ ನಾನಾ ರೀತಿಯ ಟೀಕೆಯನ್ನು ಎದುರಿಸಿದ್ದಾರೆ. ಸಂಸತ್ತಿನಿಂದ ಅವರನ್ನು ಹೊರಕ್ಕಟ್ಟಿದರು, ದೇಶದ ವಿವಿಧ ಕಡೆ ಕೇಸುಗಳನ್ನು ಹಾಕಿದರು. ಆದರೆ ಅವನ್ನೆಲ್ಲ ರಾಹುಲ್ ಎದುರಿಸಿದ್ದಾರೆ. ಅವರನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಿಯಾಂಕ ಹೇಳಿದರು.
ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಯಾರು ಪ್ರಧಾನಿ ಆಗಬೇಕೆಂದು ನಿರ್ಧಾರ ಮಾಡುತ್ತಾರೆ. ಯಾರು ಪ್ರಧಾನಿ ಆದ್ರೂ ಅವರಿಗೆ ನಮ್ಮ ಬೆಂಬಲ ಇದೆ ಎಂದು ಪ್ರಿಯಾಂಕ ಗಾಂಧಿ ಹೇಳಿದರು.
Congress General Secretary Priyanka Gandhi on Saturday stated that Rahul Gandhi would be a very good Prime Minister and that he has always stood for the people. She said Rahul Gandhi understands the pulse of the country, which makes him a perfect pick for PM.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm