ಬ್ರೇಕಿಂಗ್ ನ್ಯೂಸ್
23-05-24 08:49 pm HK NEWS ದೇಶ - ವಿದೇಶ
ನವದೆಹಲಿ, ಮೇ 23 ಎರಡು ವರ್ಷಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧ ಸಂದರ್ಭದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು ಕೂಡಲೇ ಆರೋಪಿಗಳನ್ನು ಜೈಲಿಗೆ ತಳ್ಳುವಂತೆ ಆದೇಶ ಮಾಡಿದೆ.
ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಜಾಮೀನು ಪಡೆದ ಪಿಎಫ್‌ಐ ಕಾರ್ಯಕರ್ತರನ್ನು ತಕ್ಷಣವೇ ಜೈಲಿಗೆ ಕಳುಹಿಸಲು ಸೂಚಿಸಿದೆ. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರಿದ್ದ ಪೀಠವು ಕಳೆದ ವರ್ಷ ಅಕ್ಟೋಬರ್ 19 ರಂದು ಹೈಕೋರ್ಟ್‌ನಿಂದ ಜಾಮೀನು ಪಡೆದ ಆರೋಪಿಗಳಿಗೆ ತಕ್ಷಣವೇ ಶರಣಾಗಿ ಜೈಲಿಗೆ ಹೋಗುವಂತೆ ಸೂಚಿಸಿದೆ.
ಭಯೋತ್ಪಾದನೆಗೆ ಸಂಬಂಧಿಸಿದ ಯಾವುದೇ ಕೃತ್ಯವನ್ನು ಲಘುವಾಗಿ ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪಿಎಫ್ಐ ಸಂಘಟನೆಯ ಪ್ರಮುಖರಿಗೆ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ಈ ತೀರ್ಪು ನೀಡಿದೆ.
ಪಿಎಫ್ಐ ಸಂಘಟನೆ ನಿಷೇಧ ಸಂದರ್ಭದಲ್ಲಿ ತಮಿಳುನಾಡು ಘಟಕದಲ್ಲಿ ಪ್ರಮುಖರಾಗಿದ್ದ ಬರ್ಕತುಲ್ಲಾ, ಇದ್ರಿಸ್, ಮೊಹಮ್ಮದ್ ಅಬುತಾಹಿರ್, ಖಾಲಿದ್ ಮೊಹಮ್ಮದ್, ಸಯೀದ್ ಇಶಾಕ್, ಖ್ವಾಜಾ ಮೊಹಿದಿನ್, ಯಾಸಿರ್ ಅರಾಫತ್ ಮತ್ತು ಫಯೇಜ್ ಅಹ್ಮದ್ ಅವರಿಗೆ ನೀಡಿದ್ದ ಜಾಮೀನನ್ನು ಈಗ ರದ್ದುಪಡಿಸಲಾಗಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಿಎಫ್ಐ ನಿಷೇಧ ಬೆನ್ನಲ್ಲೇ ಇವರನ್ನು ಬಂಧಿಸಲಾಗಿತ್ತು.
ಪಿಎಫ್ಐ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಯಾಗಿದ್ದು ಭಾರತದಲ್ಲಿ ಮುಸ್ಲಿಂ ಆಡಳಿತ ಸ್ಥಾಪಿಸಲು ಯೋಜನೆ ಹಾಕಿದೆ. ಷರಿಯಾ ಕಾನೂನು ಜಾರಿಗೊಳಿಸಿ ದೇಶವನ್ನು ಆಳಬೇಕೆಂಬ ಗುರಿಯನ್ನು ಪೂರೈಸಲು ಸ್ಥಾಪಿಸಲಾಗಿದೆ ಎಂದು ಎನ್ಐಎ ತನ್ನ ಅರ್ಜಿಯಲ್ಲಿ ಹೇಳಿಕೊಂಡಿತ್ತು.
The Supreme Court Wednesday faulted the “lenient view” taken by the Madras High Court in granting bail to eight members of the banned outfit Popular Front of India (PFI) and set aside its seven-month-old decision to set them free.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm