Chemical Factory blast Thane; ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ; ಅಗ್ನಿ ಅವಘಡದಲ್ಲಿ 8 ಮಂದಿ ಕಾರ್ಮಿಕರ ದಾರುಣ ಸಾವು, 50 ಮಂದಿಗೆ ಗಾಯ, 1 ಕಿ.ಮೀ ವರೆಗೂ ಕೇಳಿಸಿದ ಶಬ್ದ

23-05-24 10:24 pm       HK NEWS   ದೇಶ - ವಿದೇಶ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲಿಯಲ್ಲಿ ಗುರುವಾರ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಮಂದಿ ಗಾಯಗೊಂಡಿದ್ದಾರೆ. 

ಮಹಾರಾಷ್ಟ್ರ , ಮೇ 23:  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲಿಯಲ್ಲಿ ಗುರುವಾರ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಮಂದಿ ಗಾಯಗೊಂಡಿದ್ದಾರೆ. 

ಮುಖ್ಯಮಂತ್ರಿ ಏಕನಾಥ್ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೇ, ಅಧ್ಯಕ್ಷೆ ದ್ರೌಪದಿ ಮುರ್ಮು ಈ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಡೊಂಬಿವಿಲಿ ಎಂಐಡಿಸಿ ಪ್ರದೇಶದ 2ನೇ ಹಂತದಲ್ಲಿರುವ ಅಂಬರ್ ಕೆಮಿಕಲ್ ಕಂಪನಿಯಲ್ಲಿ ಈ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ಶಬ್ಧವು ಒಂದು ಕಿಲೋಮೀಟರ್ ದೂರಕ್ಕೆ ಕೇಳುವಷ್ಟು ಜೋರಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪರಿಣಾಮ ಅಕ್ಕಪಕ್ಕದ ಕಟ್ಟಡದ ಗಾಜಿನ ಕಿಟಕಿಗಳು ಒಡೆದಿದ್ದು, ಸುತ್ತಮುತ್ತಲಿನ ಹಲವು ಮನೆಗಳಿಗೆ ಹಾನಿಯಾಗಿದೆ. ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಫೋಟದಿಂದ ಉಂಟಾದ ಬೆಂಕಿ ಅಕ್ಕಪಕ್ಕದ ಮೂರು ಕಾರ್ಖಾನೆಗಳಿಗೆ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಯಿಂದಾದ ದಟ್ಟವಾದ ಹೊಗೆ ಬಹಳ ದೂರದವರೆಗೆ ವ್ಯಾಪಿಸಿದೆ.

ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಫ್ಯಾಕ್ಟರಿಯಲ್ಲಿ ಸಿಲುಕಿದ್ದ 8 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟ ಕುಟುಂಬ್ಥರ ಜೊತೆ ಸರ್ಕಾರ ನಿಲ್ಲಲಿದೆ.ಭಾರವಾದ ನೋವಿನಿಂದ ಸಂತಾಪ ಸೂಚಿಸುತ್ತಿದ್ದೇನೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥ ಮಾಡಲಾಗಿದೆ. ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಎಲ್ಲಾ ಸೂಚನೆ ನೀಡಲಾಗಿದೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಫಡ್ನವಿಸ್ ಹೇಳಿದ್ದಾರೆ.

Several people are feared trapped after a fire broke out at a factory in Thane's Dombiwali near Mumbai following a massive blast on Thursday. The fire occurred after a boiler inside the chemical factory located in MIDC Phase 2 exploded, officials said. Eight people have died and at least 60 were injured in the massive explosion.