ಬ್ರೇಕಿಂಗ್ ನ್ಯೂಸ್
24-05-24 10:43 pm HK News Desk ದೇಶ - ವಿದೇಶ
ನವದೆಹಲಿ, ಮೇ.24: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಾಥಮಿಕವಾಗಿ ವಿದೇಶಾಂಗ ಸಚಿವಾಲಯ, ಪ್ರಜ್ವಲ್ ಗೆ ನಿಮ್ಮ ಪಾಸ್ ಪೋರ್ಟ್ ಯಾಕೆ ರದ್ದುಪಡಿಸಬಾರದು ಎಂದು ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮೇ 23ರಂದು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಪಾಸ್ ಪೋರ್ಟ್ ರದ್ದತಿಯ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿತ್ತು.
ಪ್ರಜ್ವಲ್ ಸದ್ಯ ಜರ್ಮನಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ, ಮಾಜಿ ಪ್ರಧಾನಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದು ಎಲ್ಲಿದ್ದರೂ ಮರಳಿ ಬರುವಂತೆ ಕೇಳಿಕೊಂಡಿದ್ದರು. ಇಲ್ಲದೇ ಇದ್ದರೆ, ಕುಟುಂಬದಿಂದ ದೂರ ಇರಬೇಕಾಗುತ್ತದೆ, ನಾವು ಸಂಬಂಧ ಕಡಿದುಕೊಳ್ಳುತ್ತೇವೆ. ನಮಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಮುಖ್ಯ ಎನ್ನುವ ರೀತಿಯಲ್ಲಿ ಪತ್ರ ಬರೆದಿದ್ದರು. ಇದೇ ವೇಳೆ, ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದ್ದು, ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಿದೆ.
ಒಂದ್ವೇಳೆ, ಪಾಸ್ ಪೋರ್ಟ್ ರದ್ದಾದರೆ ಪ್ರಜ್ವಲ್ ವಿದೇಶದಲ್ಲಿ ಇರುವುದು ಅಕ್ರಮವಾಗುತ್ತದೆ. ಅಲ್ಲಿನ ಪ್ರಜೆ ಆಗಿಲ್ಲದೇ ಇದ್ದರೆ ಪಾಸ್ ಪೋರ್ಟ್ ಇಲ್ಲದೆ ಯಾವುದೇ ದೇಶದಲ್ಲಿ ನೆಲೆಸುವಂತಿಲ್ಲ. ಪಾಸ್ ಪೋರ್ಟ್ ರದ್ದಾದ ಕೂಡಲೇ ಅಲ್ಲಿನ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಭಾರತದಿಂದ ಕೋರಿಕೆ ಕಳಿಸುವ ಅವಕಾಶ ಇರುತ್ತದೆ.
The Ministry of External Affairs (MEA) has served a show-cause notice to suspended JD(S) MP Prajwal Revanna asking why his diplomatic passport should not be cancelled as sought by the Karnataka government in view of allegations of sexual abuse against him, people familiar with the matter said on May 24.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm