Rahul Gandhi, Wayanad, Raebareli, Leading; ರಾಯ್‌ಬರೇಲಿ, ವಯನಾಡ್ ನಲ್ಲಿ ರಾಹುಲ್ ಗಾಂಧಿ ಭರ್ಜರಿ ಲೀಡಿಂಗ್ ; ಗಾಂಧಿ, ನೆಹರೂ ಕುಟುಂಬದ ಭದ್ರಕೋಟೆ ಉಳಿಸಿಕೊಳ್ಳುವತ್ತ ಕಾಂಗ್ರೆಸ್

04-06-24 02:00 pm       HK News Desk   ದೇಶ - ವಿದೇಶ

ದೇಶಾದ್ಯಂತ ಕುತೂಹಲ ಹುಟ್ಟಿಸಿದ್ದ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದ ರಾಯ್‌ಬರೇಲಿ ಮತ್ತು ಕೇರಳದ ವಯನಾಡ್. ಕಾರಣ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರ ರಾಹುಲ್ ಗಾಂಧಿಯವರ ಕೈಹಿಡಿದಿರಲಿಲ್ಲ.

ಹೊಸದಿಲ್ಲಿ , ಜೂ 04: ದೇಶಾದ್ಯಂತ ಕುತೂಹಲ ಹುಟ್ಟಿಸಿದ್ದ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದ ರಾಯ್‌ಬರೇಲಿ ಮತ್ತು ಕೇರಳದ ವಯನಾಡ್. ಕಾರಣ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರ ರಾಹುಲ್ ಗಾಂಧಿಯವರ ಕೈಹಿಡಿದಿರಲಿಲ್ಲ.

ಸದ್ಯ ಈ ಎರಡೂ ಕ್ಷೇತ್ರದ ಮತಎಣಿಕೆ ಚಾಲ್ತಿಯಲ್ಲಿದ್ದು ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ತಮ್ಮ ಪ್ರತಿಸ್ಪರ್ಧಿ ವಿರುದ್ದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ವಯನಾಡ್ ನಲ್ಲಿ ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷದ ಅಭ್ಯರ್ಥಿ ವಿರುದ್ದ ರಾಹುಲ್ ಮುನ್ನಡೆಯಲ್ಲಿದ್ದಾರೆ.

ಸದ್ಯದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ ವಯನಾಡ್ ನಲ್ಲಿ 1,20,206 ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ನಾಮಪತ್ರ ಸಲ್ಲಿಸುವ ಕೊನೆಯ ದಿನದಂದು ರಾಹುಲ್ ಗಾಂಧಿ, ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದರು.

ವಯನಾಡ್ ನಲ್ಲಿ, ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷಗಳ ಭಾರೀ ವಿರೋಧದ ನಡುವೆಯೂ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದರು. ವಯನಾಡ್ ನಲ್ಲಿ ಸೋಲುವ ಭೀತಿಯಿಂದ ರಾಹುಲ್ ಗಾಂಧಿ, ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ, ಟೀಕೆ ಮಾಡಿದ್ದರು.

Congress MP Rahul Gandhi is on a dominant streak in the two Lok Sabha seats of Wayanad in Kerala and Raebareli in Uttar Pradesh as counting of votes for the 2024 general elections is underway. In Wayanad, the Congress leader, who is also the sitting MP, is ahead by 4,08,383 votes against his nearest rival, CPI veteran leader Annie Raja, who received 1,85,959 ballots, according to the Election Commission of India.