ಬ್ರೇಕಿಂಗ್ ನ್ಯೂಸ್
07-06-24 04:11 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 7: ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಬಹುಮತ ಬಂದಿರುವುದರಿಂದ ಮೈತ್ರಿ ಪಕ್ಷಗಳ ನಾಯಕರು ಇಂದು ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದ್ದು, ಪ್ರಧಾನಿ ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡುವ ಬಗ್ಗೆ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಪ್ರಸ್ತಾಪ ಮಾಡಿದ್ದು, ಅದಕ್ಕೆ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಮೈತ್ರಿ ನಾಯಕರು ಅನುಮೋದನೆ ನೀಡಿದ್ದಾರೆ.
ಸಭೆಯ ಬಳಿಕ ಜೆಡಿಯು ನಾಯಕ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರೊಂದಿಗೆ ನರೇಂದ್ರ ಮೋದಿ ಮತ್ತಿತರ ನಾಯಕರು ಇಂದು ಸಂಜೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲಿದ್ದು, ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ತಮ್ಮ ಪಕ್ಷದ ಸದಸ್ಯರ ಪಟ್ಟಿ ಹಿಡಿದು ಸರಕಾರ ರಚನೆಯ ಪ್ರಸ್ತಾಪ ಮಾಡಲಿದ್ದಾರೆ. ರಾಷ್ಟ್ರಪತಿಯಿಂದ ಸರಕಾರ ರಚಿಸಲು ಅಧಿಕೃತ ಅನುಮತಿ ಪಡೆದ ಬಳಿಕ ಪ್ರಮಾಣ ವಚನಕ್ಕೆ ದಿನ ನಿಗದಿ ಮಾಡಲಿದ್ದಾರೆ.
ಈಗಾಗಲೇ ಜೂನ್ 9ರ ಭಾನುವಾರ ಸಂಜೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತು ಸಂಪುಟ ಸದಸ್ಯರು ಪ್ರಮಾಣ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿ ಇದೆ. ಆದರೆ, ಪ್ರಮಾಣ ವಚನ ಸಮಾರಂಭಕ್ಕೆ ವಿದೇಶದ ಗಣ್ಯರನ್ನು ಆಹ್ವಾನಿಸಿದ್ದು, ಅವರ ಆಗಮನದ ದಿನಾಂಕ ದೃಢವಾದ ಬಳಿಕವೇ ದಿನ ನಿಗದಿ ಮಾಡಲಿದ್ದಾರೆ. ಮಾಹಿತಿ ಪ್ರಕಾರ, ಬಾಂಗ್ಲಾ ದೇಶದ ಅಧ್ಯಕ್ಷೆ, ನೇಪಾಳ ಮತ್ತು ಶ್ರೀಲಂಕಾದ ಪ್ರಧಾನಿಗಳು ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದೆ.
ಇದೇ ವೇಳೆ, ಜೆಡಿಯು ಕಡೆಯಿಂದ ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿ ಬಗ್ಗೆ ಆಕ್ಷೇಪ ಎತ್ತಲಾಗಿದ್ದು, ಅದನ್ನು ಪುನರ್ ವಿಮರ್ಶೆ ಮಾಡುವಂತೆ ಬೇಡಿಕೆ ಮುಂದಿಡಲಾಗಿದೆ. ಟಿಡಿಪಿಯಿಂದ ಪಕ್ಷದ ಸದಸ್ಯರಿಗೆ 3ರಿಂದ ನಾಲ್ಕು ಸಚಿವ ಸ್ಥಾನಗಳನ್ನು ನೀಡಬೇಕು ಎನ್ನುವ ಬೇಡಿಕೆ ಇಡಲಾಗಿದೆ ಎನ್ನಲಾಗುತ್ತಿದೆ. ಇದೇ ಸಂದರ್ಭದಲ್ಲಿ ಅಮಿತ್ ಷಾ ಸಣ್ಣ ಪುಟ್ಟ ಪಕ್ಷಗಳು ಮತ್ತು ಪಕ್ಷೇತರ ಸದಸ್ಯರನ್ನು ಎನ್ ಡಿಎ ಮೈತ್ರಿಕೂಟಕ್ಕೆ ಸೆಳೆಯುತ್ತಿದ್ದು, ಒಟ್ಟು ಬಲವನ್ನು ಹೆಚ್ಚಿಸುವ ಸನ್ನಾಹದಲ್ಲಿದ್ದಾರೆ.
ಎನ್ಡಿಎ ಬಲ ಫಲಿತಾಂಶದ ದಿನ 293 ಇದ್ದರೆ, ಈಗ 300 ದಾಟಿದೆ ಎನ್ನುವ ಮಾಹಿತಿಯಿದೆ. ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಹಂಗಿನಲ್ಲಿ ಇರುವುದು ಬೇಡ ಎನ್ನುವ ನೆಲೆಯಲ್ಲಿ ಆದಷ್ಟು ಪಕ್ಷೇತರ ಮತ್ತು ಸಣ್ಣ ಪಕ್ಷಗಳನ್ನು ಓಲೈಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆಯ ಉದ್ಧವ್ ಬಣದ ನಾಯಕ ಉದ್ಧವ್ ಠಾಕ್ರೆಯನ್ನೂ ಸಂಪರ್ಕಿಸಿದ್ದು, ಬೆಂಬಲ ಕೋರಿದ್ದಾರೆ. ಉದ್ಧವ್ ಬಣ ಬೆಂಬಲ ನೀಡಿದರೆ, ಜೆಡಿಯು ಅಥವಾ ಟಿಡಿಪಿ ಹಂಗನ್ನು ತೊರೆದಂತೆ ಆಗುತ್ತದೆ ಎನ್ನುವ ಯೋಜನೆಯಲ್ಲಿ ಬಿಜೆಪಿ ನಾಯಕರಿದ್ದಾರೆ.
Prominent allies on Friday proposed the name of Bharatiya Janata Party's Narendra Modi as the leader of the NDA Parliamentary party, paving the way for him to become the Prime Minister of India for the third consecutive term.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm