ಬ್ರೇಕಿಂಗ್ ನ್ಯೂಸ್
11-06-24 11:11 pm HK News Desk ದೇಶ - ವಿದೇಶ
ಹೈದರಾಬಾದ್, ಜೂನ್ 11: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಜೂನ್ 12ರ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಮೈತ್ರಿ ಪಕ್ಷದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಡಿಸಿಎಂ ಪೋಸ್ಟ್ ಮೇಲೆ ಕಣ್ಣಿಟ್ಟಿದ್ದಾರೆ. ಜನಸೇನಾ ಪಕ್ಷದ ಶಾಸಕರು ಸಭೆ ನಡೆಸಿದ್ದು ಶಾಸಕಾಂಗ ಪಕ್ಷದ ನಾಯಕನಾಗಿ ಪವನ್ ಕಲ್ಯಾಣ್ ಅವರನ್ನು ಆಯ್ಕೆ ಮಾಡಿದ್ದಾರೆ.
175 ಸದಸ್ಯ ಬಲದ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಜನಸೇನಾ ಪಕ್ಷ 21 ಶಾಸಕರನ್ನು ಹೊಂದಿದ್ದಾರೆ. ಅಸೆಂಬ್ಲಿ ಚುನಾವಣೆಯನ್ನು ಎನ್ ಡಿಎ ಮೈತ್ರಿಕೂಟದಿಂದ ಎದುರಿಸಲಾಗಿತ್ತು. ಚುನಾವಣೆಯಲ್ಲಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಸೀಟುಗಳನ್ನು ಗೆದ್ದುಕೊಂಡಿತ್ತು. ಆಡಳಿತದಲ್ಲಿದ್ದ ವೈಎಸ್ಸಾರ್ ಕಾಂಗ್ರೆಸ್ ಧೂಳೀಪಟ ಆಗಿತ್ತು. ಲೋಕಸಭೆ ಚುನಾವಣೆ ಜೊತೆಗೇ ಅಸೆಂಬ್ಲಿಗೂ ಚುನಾವಣೆ ನಡೆದಿತ್ತು. ಆಂಧ್ರದಲ್ಲಿ ಎನ್ ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ.
ಆಂಧ್ರ ಪ್ರದೇಶ ಸರಕಾರ ಬುಧವಾರ ಅಸ್ತಿತ್ವಕ್ಕೆ ಬರಲಿದ್ದು, 25 ಸಂಪುಟ ಸದಸ್ಯರು ಇರಲಿದ್ದಾರೆ. ಮಾಹಿತಿ ಪ್ರಕಾರ, 20 ಟಿಡಿಪಿ, 3 ಸಚಿವ ಸ್ಥಾನ ಮತ್ತು ಒಂದು ಡಿಸಿಎಂ ಹುದ್ದೆ ಜನಸೇನಾಗೆ ಮತ್ತು ಇಬ್ಬರು ಬಿಜೆಪಿ ಸದಸ್ಯರಿಗೆ ಸಚಿವ ಸ್ಥಾನ ಸಿಗಲಿದೆ. ವಿಜಯವಾಡಡ ಗಣ್ಣಾವರಂ ಏರ್ಪೋರ್ಟ್ ಬಳಿಯ ಐಟಿ ಪಾರ್ಕ್ ನಲ್ಲಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ಗಣ್ಯರು ಪಾಲ್ಗೊಳ್ಳುವ ಸಾಧ್ಯತೆಯಿದೆ.
1995ರಲ್ಲಿ ಚಂದ್ರಬಾಬು ನಾಯ್ಡು ಮೊದಲ ಬಾರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದರು. ಆನಂತರ, ಎರಡು ಬಾರಿ ಸಿಎಂ ಹುದ್ದೆಗೆ ಆಯ್ಕೆಯಾಗಿದ್ದರು. ಆಬಳಿಕ 9 ವರ್ಷ ಕಾಲ ಪ್ರತಿಪಕ್ಷದಲ್ಲಿದ್ದರು. ಯುನೈಟೆಡ್ ಆಂಧ್ರ ವಿಭಜನೆಯಾದ ಬಳಿಕ ತೆಲಂಗಾಣದಲ್ಲಿ ಚಂದ್ರಶೇಖರ ರಾವ್, ಆಂಧ್ರದಲ್ಲಿ ವೈಎಸ್ಸಾರ್ ಜಗನ್ ರೆಡ್ಡಿ ಅಧಿಕಾರಕ್ಕೆ ಬಂದಿದ್ದರು. ಆಂಧ್ರಪ್ರದೇಶಕ್ಕೆ ಅಮರಾವತಿಯಲ್ಲಿ ಹೊಸ ರಾಜಧಾನಿ ಮಾಡಬೇಕೆಂಬುದು ಚಂದ್ರಬಾಬು ನಾಯ್ಡು ಕನಸಾಗಿತ್ತು. ಆದರೆ, ಅಧಿಕಾರದಿಂದ ದೂರವುಳಿದ ಬಳಿಕ ಅಮರಾವತಿ ಯೋಜನೆ ನೆನೆಗುದಿಗೆ ಬಿದ್ದಿತ್ತು. ಇದೀಗ ಮತ್ತೆ ಬಾಬು ಮುಖ್ಯಮಂತ್ರಿ ಆಗುತ್ತಿದ್ದು ಅಮರಾವತಿ ರಾಜಧಾನಿಯಾಗುತ್ತಾ ಅನ್ನುವ ಕನಸು ರೆಕ್ಕೆ ಬಿಚ್ಚಿಕೊಂಡಿದೆ.
Telugu Desam Party (TDP) President and Chief Minister-elect N Chandra Babu Naidu will take oath as the Chief Minister of Andhra Pradesh on Wednesday.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm