ಬ್ರೇಕಿಂಗ್ ನ್ಯೂಸ್
05-12-20 03:48 pm Source: GOODRETURNS ದೇಶ - ವಿದೇಶ
ನವದೆಹಲಿ, ಡಿಸೆಂಬರ್ 05: ಹೆಚ್ಡಿಎಫ್ಸಿ ಬ್ಯಾಂಕ್ನ ಹೊಸ ಡಿಜಿಟಲ್ ಯೋಜನೆಗಳ ಮೇಲೆ ಆರ್ಬಿಐ ತಾತ್ಕಾಲಿಕ ನಿರ್ಬಂಧ ಹೇರಿದ ಬಳಿಕ, ಬ್ಯಾಂಕ್ ತನ್ನ ಜಾಲವನ್ನು ವಿಸ್ತರಿಸುವ ಮುನ್ನ ಐಟಿ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ಹೇಳಿದ್ದಾರೆ.
ಇತ್ತೀಚೆಗಷ್ಟೇ ಆರ್ಬಿಐ, ಹೆಚ್ಡಿಎಫ್ಸಿ ಬ್ಯಾಂಕ್ನ ಡಿಜಿಟಲ್ 2.0 ಕಾರ್ಯಕ್ರಮದಡಿ ಯಾವುದೇ ಹೊಸ ಸೇವೆಯನ್ನು ಪ್ರಾರಂಭಿಸಬಾರದು ಮತ್ತು ಯಾವುದೇ ಗ್ರಾಹಕರಿಗೆ ಹೊಸ ಕ್ರೆಡಿಟ್ ಕಾರ್ಡ್ ನೀಡಬಾರದು ಎಂದು ನಿಷೇಧ ಹೇರಿತ್ತು. ಪ್ರಾಥಮಿಕ ದತ್ತಾಂಶ ಕೇಂದ್ರದಲ್ಲಿ ವಿದ್ಯುತ್ ವೈಫಲ್ಯದಿಂದಾಗಿ 2020 ರ ನವೆಂಬರ್ 21 ರಂದು ಬ್ಯಾಂಕಿನ ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಪಾವತಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಆರ್ಬಿಐ ಹೀಗೆ ನಿರ್ದೇಶಿಸಿದೆ.
'' ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಜನರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವು ಹೆಚ್ಡಿಎಫ್ಸಿ ಬ್ಯಾಂಕ್ ಹೊಂದಿದೆ. ಜೊತೆಗೆ ಸೇವಾ ನಿಲುಗಡೆ ವಿರುದ್ಧ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ'' ಎಂದು ದಾಸ್ ಹೇಳಿದ್ದಾರೆ.
''ಡಿಜಿಟಲ್ ಬ್ಯಾಂಕಿಂಗ್ ಅನ್ನು ಬಳಸುತ್ತಿರುವ ಸಾವಿರಾರು ಮತ್ತು ಲಕ್ಷಾಂತರ ಗ್ರಾಹಕರನ್ನು ಒಟ್ಟಿಗೆ ತೊಂದರೆಗೊಳಗಾಗಲು ನಾವು ಬಿಡುವುದಿಲ್ಲ. ವಿಶೇಷವಾಗಿ ನಾವು ಡಿಜಿಟಲ್ ಬ್ಯಾಂಕ್ಗೆ ಒತ್ತು ನೀಡುತ್ತಿದ್ದೇವೆ. ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕು'' ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಗುರುವಾರ ಸ್ಥಗಿತಗೊಂಡ ಬಳಿಕ ಶಕ್ತಿಕಾಂತ ದಾಸ್ ಈ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದು ಹೇಳಿದರು.
This News Article is a Copy of Goodreturns
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm