ಬ್ರೇಕಿಂಗ್ ನ್ಯೂಸ್
19-06-24 07:22 pm HK News Desk ದೇಶ - ವಿದೇಶ
ದಿಸ್ಪುರ್, ಜೂ.19: ಆಸ್ಪತ್ರೆಯಲ್ಲಿ ಕ್ಯಾನ್ಸರ್ನಿಂದ ತನ್ನ ಹೆಂಡತಿ ಸಾವನ್ನಪ್ಪಿದ ಕೆಲವೇ ಕ್ಷಣದಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ಶೂಟ್ ಮಾಡಿಕೊಂಡು ಅದೆ ರೂಮ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಸಾಂನ ಗುವಾಹಟಿ ನಗರದಲ್ಲಿರುವ ನೆಮ್‌ಕೇರ್ ಎನ್ನುವ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಪ್ರಸ್ತುತ ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ಕಾರ್ಯದರ್ಶಿ ಹಾಗೂ 2009ರ ಬ್ಯಾಚ್‌ನ ಡಿಐಜಿ ಶ್ರೇಣಿಯ ಐಪಿಎಸ್ ಅಧಿಕಾರಿ ಶಿಲಾದಿತ್ಯ ಚೇಟಿಯಾ (44) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ಆಗಮೊನೀ ಬಾರ್ಬರುವಾ ಕಳೆದ 2 ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಹೀಗಾಗಿ ಇವರನ್ನು ನೆಮ್‌ಕೇರ್ ಖಾಸಗಿ ಆಸ್ಪತ್ರೆಗೆ ಎರಡು ತಿಂಗಳು ಹಿಂದೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಪತ್ನಿ ಅನಾರೋಗ್ಯ ಹಿನ್ನೆಲೆಯಲ್ಲಿ ಸರ್ಕಾರದ ಗೃಹ ಮತ್ತು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ 4 ತಿಂಗಳಿನಿಂದ ರಜೆಯಲ್ಲಿದ್ದರು.
ಪತ್ನಿಯನ್ನು ಆಸ್ಪತ್ರೆಯ ಐಸಿಯುನಲ್ಲಿ ದಾಖಲು ಮಾಡಿದ ಮೇಲೆ 2 ತಿಂಗಳುಗಳಿಂದ ಆಸ್ಪತ್ರೆಯಲ್ಲಿ ತಂಗಿದ್ದರು. ಇದಕ್ಕಾಗಿ ಅನುಮತಿ ಪಡೆದುಕೊಂಡು ಪ್ರತ್ಯೇಕ ರೂಮ್ ತೆಗೆದುಕೊಂಡಿದ್ದರು. ಕಳೆದ 3 ದಿನಗಳಿಂದ ಅವರ ಪತ್ನಿಯ ಸ್ಥಿತಿ ಚಿಂತಾಜನಕವಾಗಿತ್ತು. ಅದರಂತೆ ಅವರು ಆಸ್ಪತ್ರೆಯ ಐಸಿಯುನಲ್ಲಿ ಇಂದು ಸಂಜೆ ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಅಲ್ಲೇ ಇದ್ದ ಗಂಡನಿಗೆ ವೈದ್ಯರು ತಿಳಿಸಿದ್ದಾರೆ.
ಐಸಿಯುನಲ್ಲಿದ್ದ ಮೃತ ಪತ್ನಿ ಬಳಿಗೆ ತಕ್ಷಣ ಗಾಬರಿಯಿಂದ ಓಡೋಡಿ ಬಂದು ದುಃಖಿತರಾಗಿದ್ದಾರೆ. ಬಳಿಕ ನಾನು ಪ್ರಾರ್ಥನೆ ಮಾಡಬೇಕೆಂದು ಹೇಳಿ ಐಸಿಯುನಲ್ಲಿದ್ದ ಡಾಕ್ಟರ್ಸ್, ನರ್ಸ್ಗಳನ್ನ ಹೊರಗೆ ಕಳುಹಿಸಿದ್ದಾರೆ. ಇದಾದ 10 ನಿಮಿಷದ ಬಳಿಕ ತಮ್ಮಲ್ಲಿದ್ದ ಸರ್ಕಾರದ ಗನ್ನಿಂದ ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸೌಂಡ್ ಕೇಳುತ್ತಿದ್ದಂತೆ ಅಸ್ಪತ್ರೆಯ ಸಿಬ್ಬಂದಿ, ಡಾಕ್ಟರ್ಸ್ ಎಲ್ಲ ಓಡೋಡಿ ಬಂದು ಏನಾಯಿತು ಎಂದು ನೋಡಿದ್ದಾರೆ. ಆದ್ರೆ ಪತ್ನಿ ಪಕ್ಕದಲ್ಲೇ ಗಂಡ ಶವವಾಗಿ ಬಿದ್ದಿದ್ದರು. ಸದ್ಯ ಇವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅಸ್ಸಾಂನ ಇಡೀ ಪೊಲೀಸ್ ಕುಟುಂಬಗಳು ಸಂತಾಪ ವ್ಯಕ್ತಪಡಿಸಿವೆ.
Assam's Home Secretary Siladitya Chetia allegedly died by suicide at a private hospital in Guwahati after his wife passed away following prolonged illness on Tuesday, police said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm