ಬ್ರೇಕಿಂಗ್ ನ್ಯೂಸ್
23-06-24 09:39 pm HK News Desk ದೇಶ - ವಿದೇಶ
ನವದೆಹಲಿ, ಜೂನ್.23: ಮೆಡಿಕಲ್, ಇಂಜಿನಿಯರಿಂಗ್ ಸೀಟುಗಳಿಗೆ ಅರ್ಹತೆ ಗಿಟ್ಟಿಸುವ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ದೇಶಾದ್ಯಂತ ವಿವಾದಕ್ಕೆ ಈಡಾಗಿರುವಾಗಲೇ ಈ ಕುರಿತ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ. ಇದರ ಬೆನ್ನಲ್ಲೇ ಸಿಬಿಐ ಎಫ್ಐಆರ್ ದಾಖಲು ಮಾಡಿದ್ದು, ಪ್ರತ್ಯೇಕ ತಂಡಗಳನ್ನು ರಚಿಸಿ ಅಕ್ರಮ ಬೆಳಕಿಗೆ ಬಂದಿರುವ ಗುಜರಾತ್ ಮತ್ತು ಬಿಹಾರಗಳಿಗೆ ತಂಡಗಳನ್ನು ಕಳಿಸಿಕೊಟ್ಟಿದೆ.
ಇದೇ ವೇಳೆ, ಅಕ್ರಮ ಆರೋಪ ಕೇಳಿಬಂದಿರುವ ಗುಜರಾತ್, ದೆಹಲಿ, ಹರ್ಯಾಣ, ಬಿಹಾರದ ಕೆಲವು ಸೆಂಟರ್ ಗಳಲ್ಲಿ ಭಾನುವಾರ 1563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಲಾಗಿದೆ. ಮಧ್ಯಾಹ್ನ 2ರಿಂದ ಸಂಜೆ 5.20ರ ವರೆಗೆ ಪರೀಕ್ಷೆ ನಡೆದಿದ್ದು, 52 ಶೇಕಡಾ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಬಿಹಾರದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆಯನ್ನು ಪಡೆದಿದ್ದಾರೆಂದು ಆರೋಪಕ್ಕೀಡಾದ 17 ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ. ಇದಕ್ಕೂ ಮುನ್ನ ಗುಜರಾತ್, ದೆಹಲಿ ಸೇರಿ ದೇಶದ ವಿವಿಧೆಡೆ 63 ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಸಸ್ಪೆಂಡ್ ಮಾಡಲಾಗಿತ್ತು. ಇದರಲ್ಲಿ ಗೋಧ್ರಾ ಜಿಲ್ಲೆಯ 30 ಮಂದಿ ವಿದ್ಯಾರ್ಥಿಗಳಿದ್ದಾರೆ. ಮರು ಪರೀಕ್ಷೆಯ ಫಲಿತಾಂಶ ಜೂನ್ 30ರಂದು ಬರಲಿದೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ನ್ಯಾಶನಲ್ ಟೆಸ್ಟಿಂಗ್ ಏಜನ್ಸಿಯ ಮುಖ್ಯಸ್ಥರಾಗಿದ್ದ ಡೈರೆಕ್ಟರ್ ಜನರಲ್ ಸುಬೋಧ್ ಸಿಂಗ್ ಅವರನ್ನು ಶನಿವಾರ ಹುದ್ದೆಯಿಂದ ಕಿತ್ತು ಹಾಕಲಾಗಿತ್ತು. ಅಲ್ಲದೆ, ಪರೀಕ್ಷಾ ಮಂಡಳಿಯ ಬಗ್ಗೆ ತನಿಖೆ ನಡೆಸಲು ಮತ್ತು ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಬಗ್ಗೆ ಸಲಹೆ ನೀಡಲು ಇಸ್ರೋ ಮಾಜಿ ಮುಖ್ಯಸ್ಯ ರಾಧಾಕೃಷ್ಣನ್ ನೇತೃತ್ವದ ಏಳು ಮಂದಿ ತಜ್ಞರನ್ನು ಒಳಗೊಂಡ ಕಮಿಟಿಯನ್ನು ರಚಿಸಲಾಗಿದೆ. ಇದಲ್ಲದೆ, ಎನ್ ಟಿಎ ಮುಖ್ಯಸ್ಥರ ಪ್ರಭಾರ ಹೊಣೆಯನ್ನು ಇಂಡಿಯನ್ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಡೈರೆಕ್ಟರ್ ಪ್ರದೀಪ್ ಸಿಂಗ್ ಕರೋಲಾ ಅವರಿಗೆ ವಹಿಸಲಾಗಿದೆ.
ಬಿಹಾರ, ಉತ್ತರ ಪ್ರದೇಶ, ಗುಜರಾತ್, ಹರ್ಯಾಣದಲ್ಲಿ ಪ್ರತ್ಯೇಕ ದೂರುಗಳು ದಾಖಲಾಗಿದ್ದು, ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇದಲ್ಲದೆ, ಹೈಕೋರ್ಟ್, ಸುಪ್ರೀಂ ಕೋರ್ಟಿನಲ್ಲೂ ದೂರು ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ಉನ್ನತ ಮಟ್ಟದ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ಸಹಿಸುವುದಿಲ್ಲ ಎಂದು ಕೇಂದ್ರ ಸರಕಾರಕ್ಕೆ ಚಾಟಿ ಬೀಸಿತ್ತು. ಬಿಹಾರದಲ್ಲಿ ವಿದ್ಯಾರ್ಥಿಗಳು ಸೇರಿ 20ಕ್ಕೂ ಹೆಚ್ಚು ಮಂದಿ ಬಂಧಿತರಾಗಿದ್ದು, ಆರ್ಥಿಕ ಅಪರಾಧ ಹಿನ್ನೆಲೆಯಲ್ಲಿ ಇಡಿಯವರೂ ತನಿಖೆ ನಡೆಸುತ್ತಿದ್ದಾರೆ.
ಮೇ 5ರಂದು ದೇಶಾದ್ಯಂತ 4750 ಸೆಂಟರ್ ಗಳಲ್ಲಿ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರ ಫಲಿತಾಂಶ ಜೂನ್ 4ರಂದು ಪ್ರಕಟವಾಗಿದ್ದು, 67 ಮಂದಿ 720 ಪೂರ್ಣ ಅಂಕ ಪಡೆದಿದ್ದು ಭಾರೀ ಸಂಶಯಕ್ಕೆ ಕಾರಣವಾಗಿತ್ತು. ಈ ರೀತಿಯ ಫಲಿತಾಂಶ ನೀಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಂದಿತ್ತು. ಪೂರ್ಣ ಅಂಕ ಪಡೆದವರಲ್ಲಿ ಆರು ಮಂದಿ ಹರ್ಯಾಣದ ಫರೀದಾಬಾದ್ ಕೇಂದ್ರವೊಂದರ ವಿದ್ಯಾರ್ಥಿಗಳಾಗಿದ್ದು ಅಕ್ರಮದ ಬಗ್ಗೆ ಸಂಶಯ ಹುಟ್ಟಲು ಕಾರಣವಾಗಿತ್ತು.
The Gujarat government on Sunday decided to hand over the investigation into the alleged multi-crore NEET (National Eligibility-cum-Entrance Test) cheating scam in Godhra to the Central Bureau of Investigation (CBI).
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm