ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm