ಬ್ರೇಕಿಂಗ್ ನ್ಯೂಸ್
28-07-24 04:59 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 28: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಮೊದಲ ಪದಕ ಗೆದ್ದುಕೊಂಡಿದ್ದು, ಶೂಟಿಂಗ್ ನಲ್ಲಿ ಮನು ಭಾಕರ್ ಕಂಚಿನ ಪದಕಕ್ಕೆ ಗುರಿಯಿಟ್ಟಿದ್ದಾರೆ.
10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಮನು ಬಾಕರ್ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಈ ಸಾಧನೆಯ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಶೂಟಿಂಗ್ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡರು. ಈ ಮಧ್ಯೆ ಅರ್ಜುನ್ ಬಬುಟಾ ಮತ್ತು ರಮಿತಾ ಜಿಂದಾಲ್ ಪುರುಷರ ಮತ್ತು ಮಹಿಳೆಯರ ಏರ್ ರೈಪಲ್ ವಿಭಾಗದಲ್ಲಿ ಪೈನಲ್ ಪ್ರವೇಶಿಸಿದ್ದು ಭಾರತದ ಪದಕದ ಆಸೆಯನ್ನು ಜೀವಂತವಿರಿಸಿಕೊಂಡಿದ್ದಾರೆ. ರೋವಿಂಗ್ ಸ್ಪರ್ಧೆಯಲ್ಲಿ ಬಲರಾಜ್ ಪನ್ವಲ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಒಲಿಂಪಿಕ್ಸ್ ಹಾಕಿ, ಭಾರತ ಶುಭಾರಂಭ
ಒಲಿಂಪಿಕ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು 3-2ರಿಂದ ಸೋಲಿಸಿ ಶುಭಾರಂಭ ಮಾಡಿದೆ.
ಮೊದಲಾರ್ಧದಲ್ಲಿ ಒಂದು ಗೋಲಿನ ಹಿನ್ನಡೆ ಕಂಡಿದ್ದ ಟೋಕಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಮುಂದಿನ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ, ಹಿನ್ನಡೆ ನೀಗಿಸಿ ಗೆಲುವು ಸಾಧಿಸಿತು. ಎಂಟನೇ ನಿಮಿಷದಲ್ಲೇ ಸಿಕ್ಕ ಪೆನಾಲ್ಟಿ ಅವಕಾಶದಲ್ಲಿ ನ್ಯೂಜಿಲೆಂಡ್ ಮುನ್ನಡೆ ಸಾಧಿಸಿತು.
ದ್ವಿತೀಯ ಅವಧಿಯಲ್ಲಿ ಭಾರತ, ನ್ಯೂಜಿಲೆಂಡ್ ತಂಡದ ರಕ್ಷಣೆಯನ್ನು ಬೇಧಿಸಿತು. ದ್ವಿತೀಯ ಅವಧಿ ಮುಗಿಯಲು ಕೆಲವೇ ಕ್ಷಣಗಳಿರುವಾಗ ಮಂದೀಪ್ ಸಿಂಗ್ ಗೋಲು ಬಾರಿಸಿ ಸಮಬಲಕ್ಕೆ ತಂದರು. ಮೂರನೇ ಅವಧಿಯ ನಾಲ್ಕನೇ ನಿಮಿಷದಲ್ಲಿ ವಿವೇಕ್ ಸಾಗರ್ ಪ್ರಸಾದ್ ಗೋಲು ಬಾರಿಸಿ ಮುನ್ನಡೆ ಒದಗಿಸಿದರು. ಅಂತಿಮ ಅವಧಿಯಲ್ಲಿ ಮೊದಲಿಗೆ ನ್ಯೂಜಿಲೆಂಡ್ ಗೋಲು ಬಾರಿಸಿ ಅಂತರ ಸಮಬಲ ಮಾಡಿದರೂ, ನಾಯಕ ಹರ್ಮನ್ ಪ್ರೀತ್ ಸಿಂಗ್ ಕೊನೆಯ ಕ್ಷಣದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿ ಭಾರತದ ಗೆಲುವಿಗೆ ಕಾರಣರಾದರು.
Indian shooter Manu Bhaker and the women's archery team are set to compete for India's first medal at the Paris 2024 Olympics on Sunday, July 28. Additionally, badminton star PV Sindhu and two-time boxing world champion Nikhat Zareen will begin their quests for Olympic glory on the same day.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm