ಬ್ರೇಕಿಂಗ್ ನ್ಯೂಸ್
30-07-24 02:52 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 30 : ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಂಗಳವಾರ ಭಾರತ ಎರಡನೇ ಪದಕ ತನ್ನದಾಗಿಸಿಕೊಂಡಿದೆ. ಭಾನುವಾರ ಮೊದಲ ಪದಕ ಗೆದ್ದಿದ್ದ ಶೂಟಿಂಗ್ ತಾರೆ ಮನು ಭಾಕರ್ ಮಂಗಳವಾರ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ನ ಮಿಶ್ರ ವಿಭಾಗದಲ್ಲಿ ಸರಬ್ಜೋತ್ ಸಿಂಗ್ ಜೊತೆಗೂಡಿ ಕಂಚಿನ ಪದಕಕ್ಕೆ ಗುರಿ ಇಟ್ಟರು.
ಇದರೊಂದಿಗೆ ಭಾರತ ಪ್ರಸಕ್ತ ನಡೆಯುತ್ತಿರುವ ಒಲಿಂಪಿಕ್ಸ್ನಲ್ಲಿ ಎರಡನೇ ಪದಕ ಜಯಿಸಿದಂತಾಗಿದೆ. ಕಂಚಿನ ಪದಕಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಭಾರತದ ಜೋಡಿ, ದಕ್ಷಿಣ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ವಿರುದ್ಧ 16-10 ಅಂತರದ ಜಯ ದಾಖಲಿಸಿ ಪದಕ ತಮ್ಮದಾಗಿಸಿಕೊಂಡರು. ಮನು ಭಾಕರ್ ಸಾಧನೆಯಿಂದ ಭಾರತದ ಶೂಟಿಂಗ್ ತಾರೆಯೊಬ್ಬರು ಒಂದೇ ಒಲಿಂಪಿಕ್ಸ್ನಲ್ಲಿ ಶೂಟಿಂಗ್ ಸ್ಪರ್ಧೆಯಲ್ಲಿ ಎರಡು ಪದಕ ಜಯಿಸಿದ ಸಾಧನೆ ಮಾಡಿದಂತಾಗಿದೆ. ಭಾನುವಾರ ಮನು ಭಾಕರ್ ಮಹಿಳಾ ವಿಭಾಗದ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಇದಲ್ಲದೆ ಒಂದೇ ಒಲಿಂಪಿಕ್ಸ್ನಲ್ಲಿ ವೈಯಕ್ತಿಕವಾಗಿ ಎರಡು ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು ಎಂಬ ದಾಖಲೆಯೂ ಮನು ಭಾಕರ್ ಹೆಸರಿಗೆ ದಾಖಲಾಯಿತು.
ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಶ್ಲಾಘನೆ
ಮನು ಭಾಕರ್ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ನಮ್ಮ ಶೂಟರ್ ಗಳು ನಮ್ಮನ್ನು ಹೆಮ್ಮೆಪಡಿಸುವುದನ್ನು ಮುಂದುವರಿಸಿದ್ದಾರೆ. ಒಲಿಂಪಿಕ್ಸ್ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಅವರು ಕಂಚಿನ ಪದಕ ಗೆದ್ದಿದ್ದಾರೆ. ಇಬ್ಬರು ಉತ್ತಮ ಕೌಶಲ್ಯ ಹಾಗೂ ಟೀಮ್ ವರ್ಕ್ ಪ್ರದರ್ಶಿಸಿದ್ದಾರೆ. ಕಂಚಿನ ಪದಕ ಗೆದ್ದಿರುವುದು ಬಹಳಷ್ಟು ಸಂತಸ ತಂದಿದೆ. ಮನು ಅವರಿಗೆ ಇದು ಸತತ 2ನೇ ಪದಕವಾಗಿದ್ದು, ಇದು ಅವರ ಶ್ರೇಷ್ಠತೆ ಹಾಗೂ ಸಮರ್ಪಣೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಪೋಸ್ಟ್ ಮಾಡಿ, ಒಲಿಂಪಿಕ್ಸ್ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಟೆನಿಸ್ ಸವಾಲು ಅಂತ್ಯ
ಟೆನಿಸ್ನಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ. ಭಾರತದ ಡಬಲ್ಸ್ ಜೋಡಿ ರೋಹನ್ ಬೋಪಣ್ಣ ಮತ್ತು ಶ್ರೀರಾಮ್ ಬಾಲಾಜಿ ಮೊದಲ ಸುತ್ತಿನ ಪಂದ್ಯದಲ್ಲಿ ಜರ್ಮನಿಯ ಯಾಕೊಬ್ ಶಾನಿಟರ್ ಮತ್ತು ಮಾರ್ಕ್ ವಾಲ್ಟನರ್ ಜೋಡಿಯ ಎದುರು 1-6, 4-6 ಅಂತರದ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದರು. ಇದರೊಂದಿಗೆ 44 ವರ್ಷದ ರೋಹನ್ ಬೋಪಣ್ಣ ಭಾರತದ ಟೆನಿಸ್ ವೃತ್ತಿಜೀವನಕ್ಕೂ ವಿದಾಯ ಘೋಷಿಸಿದರು. ಆದರೆ ಎಟಿಪಿ ಆಯೋಜಿತ ಟೆನಿಸ್ ಟೂರ್ನಿಗಳಲ್ಲಿ ಅವರು ಆಡಲಿದ್ದಾರೆ.
Manu Bhaker and Sarabjot Singh clinch Bronze medal in mixed 10m air pistol shooting at Paris Olympics, taking India's medal tally to two. Manu Bhaker has become the first Indian after Independence to claim two medals in a single Olympics, having already won the women's 10m air pistol bronze.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 09:23 pm
Mangaluru staff
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm