ಬ್ರೇಕಿಂಗ್ ನ್ಯೂಸ್
02-08-24 11:39 am HK News Desk ದೇಶ - ವಿದೇಶ
ನವದೆಹಲಿ, ಆ.02: ದೇಶಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಕರ್ನಾಟಕ, ಕೇರಳ, ಉತ್ತರಾಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭೂಕುಸಿತದಿಂದ ಸಾವು ನೋವು ಸಂಭವಿಸಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.
ಸದ್ಯಕ್ಕಂತೂ ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ, ಹೀಗಿರೋವಾಗ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿಯೂ ಇದೇ ರೀತಿ ಮಳೆಯಾಗಲಿದೆಯೇ ಎಂಬ ಪ್ರಶ್ನೆಯೂ ಮೂಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖವನ್ನು ಎದುರಿಸುತ್ತಿದ್ದ ಜನರು ಮುಂದಿನ ದಿನಗಳಲ್ಲಿ ಭಾರೀ ಮಳೆಯನ್ನು ಎದುರಿಸುವ ಸಾಧ್ಯತೆ ಇದೆ.
ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆಯನ್ನೂ ನೀಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಭಾರೀ ಮಳೆ ಬಂದಿದ್ದೇ ಆದಲ್ಲಿ ಅಲ್ಲಲ್ಲಿ ಅವಘಡಗಳೂ ಸಂಭವಿಸುವ ಸಾಧ್ಯತೆ ಇದೆ. ಈ ಮಳೆಯು ಆಗಸ್ಟ್ ಅಂತ್ಯದವರೆಗೆ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಭಾರತದಲ್ಲಿ ಸರಾಸರಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ (ಆಗಸ್ಟ್ 1) ಭವಿಷ್ಯ ನುಡಿದಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ದೇಶದಾದ್ಯಂತ ಮಳೆಯು ದೀರ್ಘಾವಧಿಯ ಸರಾಸರಿಯ 106 ಶೇಕಡಾ, ಇದು 422.8 ಮಿಮೀ ಎಂದು IMD ಹೇಳುತ್ತದೆ. ಜೂನ್ 1 ರಿಂದ ದೇಶದಲ್ಲಿ 453.8 ಮಿಮೀ ಮಳೆಯಾಗಿದೆ, ಆದರೆ ಸಾಮಾನ್ಯ ಮಳೆ 445.8 ಮಿಮೀ ಆಗಿದೆ. ಇದು ವಾಡಿಕೆಗಿಂತ ಶೇ.2ರಷ್ಟು ಹೆಚ್ಚು ಮಳೆಯಾಗಿದೆ. ಏಕೆಂದರೆ, ಜೂನ್ನಲ್ಲಿ ಒಣಗಿದ್ದ ನಂತರ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುಖ್ಯಸ್ಥ ಮೃತ್ಯುಂಜಯ್ ಮಹಾಪಾತ್ರ ಮಾತನಾಡಿ, ದೇಶದ ಬಹುತೇಕ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಆದಾಗ್ಯೂ, ಪೂರ್ವ ಭಾರತದ ಪಕ್ಕದಲ್ಲಿರುವ ಈಶಾನ್ಯ, ಲಡಾಖ್, ಸೌರಾಷ್ಟ್ರ ಮತ್ತು ಕಚ್ನ ಕೆಲವು ಪ್ರದೇಶಗಳು ಮತ್ತು ಮಧ್ಯ ಮತ್ತು ಪರ್ಯಾಯ ಭಾರತದ ಕೆಲವು ಪ್ರದೇಶಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
The India Meteorological Department (IMD) said on Thursday that India is expected to have more rain than usual in August and September. There is also a good chance that favourable La Nina conditions will develop by the end of August.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 07:25 pm
HK News Staffer
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm