ಬ್ರೇಕಿಂಗ್ ನ್ಯೂಸ್
02-08-24 11:51 am HK News Desk ದೇಶ - ವಿದೇಶ
ಹೊಸದಿಲ್ಲಿ, ಆ 2: ಹಿಮಾಚಲ ಪ್ರದೇಶ, ಉತ್ತರಾಖಂಡ ಹಾಗೂ ರಾಜಧಾನಿ ದಿಲ್ಲಿ ಸೇರಿದಂತೆ ಉತ್ತರ ಭಾರತದ 7 ರಾಜ್ಯಗಳು ವರುಣಾರ್ಭಟಕ್ಕೆ ತತ್ತರಿಸಿವೆ. ಮಳೆ ಸಂಬಂಧಿತ ಪ್ರತ್ಯೇಕ ಅವಘಡಗಳಲ್ಲಿ ದೇಶಾದ್ಯಂತ ಗುರುವಾರ 32 ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದೆ.
ಉತ್ತರಾಖಂಡದಲ್ಲಿ ಬುಧವಾರ ತಡರಾತ್ರಿ ಮೇಘಸ್ಫೋಟದಿಂದ ಭಾರಿ ಮಳೆಯಾಗಿದ್ದು, ನದಿಗಳ ನೀರಿನ ಮಟ್ಟದಲ್ಲಿ ದಿಢೀರ್ ಏರಿಕೆಯಾಗಿದೆ. ಇದರಿಂದ ಉಂಟಾದ ಪ್ರವಾಹವು ಗುಡ್ಡಕುಸಿತ, ಭೂಕುಸಿತಕ್ಕೆ ದಾರಿ ಮಾಡಿದೆ. ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 14ಕ್ಕೆ ಏರಿದೆ. ಹರಿದ್ವಾರ, ಡೆಹ್ರಾಡೂನ್, ಠಹರಿ ಹಾಗೂ ಚಮೋಲಿ ಜಿಲ್ಲೆಗಳು ಅತಿವೃಷ್ಟಿಗೆ ತತ್ತರಿಸಿವೆ.
ಹಿಮಾಚಲ ಪ್ರದೇಶದಲ್ಲಿ ಕೂಡ ಮೇಘಸ್ಫೋಟವಾಗಿದ್ದು, ಪ್ರವಾಹದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನದಿಗಳ ನೀರಿನ ಮಟ್ಟ ಅಪಾಯಕಾರಿ ಮಟ್ಟಕ್ಕೆ ಏರಿದ್ದು, ನದಿ ತೀರದ ಪ್ರದೇಶಗಳು ಜಲಾವೃತವಾಗಿವೆ. ಇಲ್ಲಿನ ಕುಲ್ಲು, ಮಂಡಿ ಹಾಗೂ ಶಿಮ್ಲಾ ಜಿಲ್ಲೆಗಳಲ್ಲಿ ಮೇಘಸ್ಫೋಟ ಸಂಭವಿಸಿದೆ. ಹಿಮಾಚಲದಲ್ಲಿ ಐವರು ಮೃತಪಟ್ಟಿದ್ದು ಸುಮಾರು 50 ಜನರು ಕಾಣೆಯಾಗಿದ್ದಾರೆ. ಹಲವು ಮನೆಗಳು, ಸೇತುವೆಗಳು ಕೊಚ್ಚಿ ಹೋಗಿವೆ. ಈ ಜಿಲ್ಲೆಗಳಲ್ಲಿನ ರಸ್ತೆ ಸಂಪರ್ಕವು ಕಡಿತಗೊಂಡಿದೆ.
''ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಆದರೆ, ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಕಾರ್ಯಾಚರಣೆಗೆ ಅಡಚಣೆಯಾಗುತ್ತಿದೆ,'' ಎಂದು ಶಿಮ್ಲಾ ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಹೇಳಿದ್ದಾರೆ.
ಹಿಮಾಚಲದಲ್ಲಿ 2023ರ ಮುಂಗಾರಿನ ಸಂದರ್ಭದಲ್ಲಿ ಉಂಟಾಗಿದ್ದ ಪರಿಸ್ಥಿತಿ ಮರುಕಳಿಸಿದೆ. ಅನೇಕ ಮನೆಗಳಿಗೆ ಹಾನಿಯಾಗಿದೆ. ಚಂಡೀಗಡ- ಮನಾಲಿ, ಮನಾಲಿ- ಲೇಹ್ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಪಾರ್ವತಿ ಕಣಿವೆಯ ಮಲಾನಾ ಹೈಡ್ರೋ ಪ್ರಾಜೆಕ್ಟ್ ಸ್ಥಳಕ್ಕೆ ಹಾನಿಯಾಗಿದೆ.
450 ಕೇದಾರನಾಥ ಯಾತ್ರಿಗಳು ಅತಂತ್ರ ;
ಗೌರಿಕುಂಡ-ಕೇದಾರನಾಥ ಚಾರಣ ಮಾರ್ಗದಲ್ಲಿ ಸುಮಾರು 20-25 ಮೀಟರ್ ಉದ್ದದ ರಸ್ತೆ ಮಾರ್ಗವು ಭೂಕುಸಿತದಿಂದ ಹಾನಿಗೊಳಗಾಗಿದ್ದು, ಸುಮಾರು 450 ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಕೇದಾರನಾಥ ಮಾರ್ಗದಲ್ಲಿನ ಭೀಮ್ಬಲಿ ಚೌಕಿ ಬಳಿ ಸುಮಾರು 200 ಯಾತ್ರಿಗಳು ಸಿಲುಕಿಕೊಂಡಿದ್ದರು. ಇವರನ್ನು ರಕ್ಷಿಸಲಾಗಿದ್ದು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಕೇದಾರನಾಥ ಮಾರ್ಗದ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ.
ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಮೂಲಕ 737 ಜನರನ್ನು ರಕ್ಷಿಸಲಾಗಿದೆ. ಪರಿಹಾರ ಸಿಬ್ಬಂದಿಯು ಕನಿಷ್ಠ 2670 ಮಂದಿಯನ್ನು ಸೋನಪ್ರಯಾಗದ ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ಸಿಡಿಲು ಬಡಿದು 15 ಮಂದಿ ಸಾವು ;
ಇನ್ನು ಬಿಹಾರದಲ್ಲಿ ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಪಾಟ್ನಾ ಮತ್ತು ವೈಶಾಲಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ ನೀಡಿದೆ.
ಔರಂಗಾಬಾದ್, ಜೆಹಾನಾಬಾದ್, ಸರನ್, ರೋಹ್ತಾಸ್, ನಳಂದಾ ಮತ್ತು ಜಮುಯಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
As many as 32 people have died in rain-related incidents in seven states since Wednesday evening, as monsoon mayhem continued in India. While record single-day rain submerged Delhi-NCR, cloudbursts in Uttarakhand and Himachal Pradesh claimed the lives of at least 14 even as several others were missing.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm