ಬ್ರೇಕಿಂಗ್ ನ್ಯೂಸ್
08-12-20 01:40 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಡಿ. 8 : ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ನಡೆಸುತ್ತಿರುವ ರೈತ ಸಂಘಟನೆಗಳು ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿವೆ.
ದೇಶದ ಬಹುತೇಕ ಕಡೆ ರಸ್ತೆ ತಡೆ, ರೈಲ್ ರೋಕೋ ಇತ್ಯಾದಿ ಪ್ರತಿಭಟನೆಗಳು ನಡೆಸಲಾಗುತ್ತಿದೆ. ಜನ ಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ರೈತರು ಎಲ್ಲಿಯೂ ಬಲವಂತದಿಂದ ಅಂಗಡಿ-ಮುಂಗಟ್ಟು, ಸಾರಿಗೆಯನ್ನು ಬಂದ್ ಮಾಡುವ ಕೆಲಸ ಮಾಡಿಲ್ಲ. ಆದರೆ, ಪ್ರತಿಯೊಂದು ಜಿಲ್ಲೆಗಳಲ್ಲೂ ರೈತರು ಅಲ್ಲಲ್ಲಿ ವಿವಿಧ ರೀತಿಯಲ್ಲಿ ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆಗಳ ಕೇಂದ್ರ ಬಿಂದುವಾಗಿರುವ ದಿಲ್ಲಿ -ಪಂಜಾಬ್-ಹರಿಯಾಣ ಗಡಿಭಾಗಗಳಲ್ಲಿ ಭಾರೀ ಬಿಗಿಭದ್ರತೆ ವಹಿಸಲಾಗಿದೆ. 13 ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿರುವ ದಿಲ್ಲಿ-ಹರಿಯಾಣ ಗಡಿಭಾಗವಾದ ಸಿಂಘು ಬಳಿ ಭದ್ರತೆ ಇಂದು ಇನ್ನಷ್ಟು ಹೆಚ್ಚಿಸಲಾಗಿದೆ. ದಿಲ್ಲಿಯೊಳಗೆ ಪ್ರತಿಭಟನಕಾರರು ನುಗ್ಗುವ ಸಾಧ್ಯತೆ ಇರುವುದರಿಂದ ಟಿಕ್ರಿ, ಝರೋಡಾ, ಧಾನ್ಸಾ ಗಡಿಭಾಗವನ್ನು ಪೊಲೀಸರು ಮುಚ್ಚಿದ್ದಾರೆ. ಬಡುಸರಾಯ್, ಝಟಿಕಾರ ಗಡಿಭಾಗಗಳಲ್ಲಿ ನಿರ್ಬಂಧ ಹೇರಿ ಕೆಲ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.



ತೆಲಂಗಾಣ, ಪಶ್ಚಿಮಬಂಗಾಳ ಮೊದಲಾದ ಕೆಲ ರಾಜ್ಯಗಳಲ್ಲಿ ಪ್ರತಿಭಟನೆಗಳು ಜೋರಾಗಿದೆ. ತೆಲಂಗಾಣದಲ್ಲಿ ಆಡಳಿತ ರೂಢ ಟಿಆರ್ಎಸ್ ಸೇರಿದಂತೆ ಎಲ್ಲಾ ಬಿಜೆಪಿಯೇತರ ಪಕ್ಷಗಳು ಬಂದ್ಗೆ ಬೆಂಬಲ ನೀಡಿದೆ. ಪಶ್ಚಿಮಬಂಗಾಳದಲ್ಲಿ ಎಡಪಕ್ಷಗಳು ರೈಲು ತಡೆ ಸೇರಿದಂತೆ ವಿವಿಧ ಪ್ರತಿಭಟನೆಗಳನ್ನು ನಡೆಸುತ್ತಿವೆ.
ಬಂದ್ಗೆ ಸುಮಾರು 15 ವಿರೋಧ ಪಕ್ಷಗಳು ಹಾಗೂ ಹಲವಾರು ಕಾರ್ಮಿಕ ಒಕ್ಕೂಟಗಳು ಬೆಂಬಲ ನೀಡಿವೆ. ಪಂಜಾಬ್, ಹರ್ಯಾಣ ಹಾಗೂ ಉತ್ತರಪ್ರದೇಶ ರೈತರುಗಳು ಇಂದು ಬೆಳಗ್ಗೆ 11ರಿಂದ ಅಪರಾಹ್ನ 3ರ ತನಕ ಚಕ್ಕ ಜಾಮ್ ಪ್ರತಿಭಟನೆ ನಡೆಸಲಿದ್ದಾರೆ. ರೈತರು ದೇಶಾದ್ಯಂತ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳದ ಜಾಧವ್ಪುರ ರೈಲ್ವೆ ಸ್ಟೇಶನ್ಲ್ಲಿ ಎಡ ಪಕ್ಷಗಳ ಬೆಂಬಲಿಗರು ರೈಲು ಓಡಾಟಕ್ಕೆ ತಡೆಯೊಡ್ಡಿದರು.
A country-wide strike by farmers in India has begun amid a standoff with the government over new farm laws. Tuesday's strike follows three rounds of inconclusive talks between the two sides over laws that farmers say are against their interests.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm