ಬ್ರೇಕಿಂಗ್ ನ್ಯೂಸ್
04-08-24 01:32 pm HK News Desk ದೇಶ - ವಿದೇಶ
ವಯನಾಡ್, ಆ.04: ಭೂಕುಸಿತ ಸಂಭವಿಸಿ ಇಂದಿಗೆ 6 ದಿನ ಕಳೆದಿದೆ. 360ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಅತ್ತ ಬದುಕುಳಿದವರು ನೋವನ್ನು ಅರಗಿಸಿಕೊಳ್ಳುತ್ತಿರುವುದರ ಜೊತೆಗೆ ಕಳ್ಳರ ಕಾಟದಿಂದ ಕೂಡ ಬೇಸತ್ತಿದ್ದಾರೆ.
ವಯನಾಡು ಜುಲೈ 30ರಂದು ಭೂಕುಸಿತದಿಂದ ಸಂಭವಿಸಿತ್ತು. ಸದ್ಯ ಅಲ್ಲಿನ ಪ್ರದೇಶ ಅಕ್ಷರಶಃ ಸ್ಮಶಾನದಂತಾಗಿದೆ. ಇಂಥಾ ಸಂಕಷ್ಟದ ಸಮಯದಲ್ಲೂ ಕೆಲವರು ಮನೆ ಮನೆ ನುಗ್ಗಿ ಚಿನ್ನಾಭರಣ ದೋಚುತ್ತಿದ್ದಾರಂತೆ. ರಕ್ಷಣಾ ಕಾರ್ಯಚರಣೆ ಎಂಬ ನೆಪದಲ್ಲಿ ಕದಿಯುತ್ತಿದ್ದಾರಂತೆ. ಮನೆಯ ಡೋರ್ ಒಡೆದು ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರಂತೆ. ಸದ್ಯ ಈ ವಿಚಾರ ಬೆಳಕಿಗೆ ಬಂದಂತೆ ಪೊಲೀಸರು ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾರೆ.
ಭೂಕುಸಿತದಿಂದ ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ, ದುರಂತದ ಸಮಯದಲ್ಲಿ ನಮ್ಮ ಸುರಕ್ಷತೆಯ ಉದ್ದೇಶದಿಂದ ಮನೆಗಳನ್ನು ಬಿಟ್ಟು ಹೋಗಿದ್ದೆವು. ನಮ್ಮ ಮನೆಯ ಸ್ಥಿತಿಯನ್ನು ಪರಿಶೀಲಿಸಲು ನಾವು ಹಿಂತಿರುಗಿದಾಗ, ಬಾಗಿಲು ಮುರಿದು ತೆರೆದಿರುವುದನ್ನು ನೋಡಿದ್ದೇವೆ. ಸದ್ಯ ಅವರು ತಂಗಿರುವ ರೆಸಾರ್ಟ್ನಲ್ಲಿರುವ ಅವರ ಕೊಠಡಿಯನ್ನು ಕೂಡ ಕಳ್ಳರು ಗುರಿಯಾಗಿಸಿಕೊಂಡು ಅವರ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೂರಿದರು. ಶನಿವಾರ ಸಂಜೆ ಹೇಳಿಕೆ ನೀಡಿರುವ ಅಧಿಕಾರಿಗಳು, ಚೂರಲ್ಮಲಾ, ಮುಂಡಕ್ಕೈ ಸೇರಿದಂತೆ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ವರದಿ ಹೇಳಿದೆ.
ರಾತ್ರಿ ವೇಳೆ ಅನುಮತಿ ಇಲ್ಲದೆ ಓಡಾಡುವಂತಿಲ್ಲ ;
ಭೂಕುಸಿತ ಪೀಡಿತ ಪ್ರದೇಶಗಳಿಗೆ ಅಥವಾ ಸಂತ್ರಸ್ತರ ಮನೆಗಳಿಗೆ ರಾತ್ರಿಯಲ್ಲಿ ಅನುಮತಿಯಿಲ್ಲದೆ ಪ್ರವೇಶಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯ ಹೆಸರಿನಲ್ಲಿ ಅಥವಾ ರಾತ್ರಿಯಲ್ಲಿ ಪೊಲೀಸರ ಅನುಮತಿಯಿಲ್ಲದೆ ಪೀಡಿತ ಪ್ರದೇಶಗಳಿಗೆ ಅಥವಾ ಮನೆಗಳಿಗೆ ಪ್ರವೇಶಿಸಲು ಯಾರಿಗೂ ಅವಕಾಶವಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ವಯನಾಡಿನ ಭೂಕುಸಿತದಲ್ಲಿ ಇದುವರೆಗೆ 219 ಮೃತದೇಹಗಳು ಪತ್ತೆಯಾಗಿದ್ದು, ಅದರಲ್ಲಿ 154 ಪ್ರತ್ಯೇಕ ದೇಹದ ಭಾಗಗಳು ಸಿಕ್ಕಿವೆ. ಮೃತಪಟ್ಟವರಲ್ಲಿ 96 ಪುರುಷರು, 87 ಮಹಿಳೆಯರು ಮತ್ತು 36 ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
Residents of landslide-devastated villages in Kerala's Wayanad district who were forced to flee their homes have reported thefts from their abandoned properties, prompting police to increase night patrols. The displaced residents suspect that thieves might be taking advantage of the state's biggest humanitarian crisis to steal valuables.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm