ಬ್ರೇಕಿಂಗ್ ನ್ಯೂಸ್
05-08-24 10:42 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್.5: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ರಿಕ್ತರ ಗುಂಪೊಂದು ಸೋಮವಾರ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದು, ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿ ಮಾಡಿದೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮುಖಂಡರು ಭಯಭೀತರಾಗಿದ್ದಾರೆ. ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬಂಗಬಂಧು ಸ್ಮಾರಕ ಮ್ಯೂಸಿಯಂ ಸೇರಿದಂತೆ ಢಾಕಾದಲ್ಲಿ ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳಿಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣಾರ್ಥ ಈ ಮ್ಯೂಸಿಯಂ ಸ್ಥಾಪಿಸಲಾಗಿತ್ತು.
ಮಾರ್ಚ್ 2010 ರಲ್ಲಿ ಉದ್ಘಾಟನೆಗೊಂಡ ಇಂದಿರಾ ಗಾಂಧಿ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರ ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸಲಾಗುತಿತ್ತು. ಯೋಗ, ಹಿಂದಿ, ಭಾರತೀಯ ಶಾಸ್ತ್ರೀಯ ಗಾಯನ, ಸಂಗೀತ, ಕಥಕ್ ಮತ್ತು ಮಣಿಪುರಿಯಂತಹ ಭಾರತೀಯ ನೃತ್ಯಗಳಿಗೆ ಭಾರತ ಮೂಲದ ವೃತ್ತಿಪರರು ಮತ್ತು ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಿದ್ದರು. ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಲ್ಲಿ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಈ ಕೇಂದ್ರದಲ್ಲಿತ್ತು.
An unruly mob on Monday damaged the Indira Gandhi Cultural Centre (IGCC) and the Bangabandhu Memorial Museum located at the Dhanmondi area in the Bangladesh capital, eyewitnesses said.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm