ಬ್ರೇಕಿಂಗ್ ನ್ಯೂಸ್
10-08-24 09:35 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್ 10: ಶೇಖ್ ಹಸೀನಾ ದೇಶ ಬಿಟ್ಟು ಹೋದ ಬಳಿಕ ಅವರ ಪರವಾಗಿದ್ದರು ಎನ್ನಲಾದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಒಬೈದುಲ್ ಹಸನ್ ಈಗ ಹೋರಾಟಗಾರರ ಟಾರ್ಗೆಟ್ ಆಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಹಾಗೂ ಇತರ ನ್ಯಾಯಾಧೀಶರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಶನಿವಾರ ಬೆಳಗ್ಗೆ ವಿದ್ಯಾರ್ಥಿ ಮುಖಂಡರು, ವಕೀಲರು ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಹೊರಗೆ ನಿಂತು ಪ್ರತಿಭಟಿಸಿದ್ದು, ರಾಜಿನಾಮೆ ನೀಡದೇ ಇದ್ದರೆ ನ್ಯಾಯಾಧೀಶರ ನಿವಾಸಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನ ಒಂದು ಗಂಟೆ ವರೆಗೆ ಗಡುವು ನೀಡಿದ್ದರು. ಆನಂತರ, ಹೋರಾಟಗಾರರ ಭಯದಿಂದಾಗಿ ನ್ಯಾಯಾಧೀಶರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಒಪ್ಪಿದ್ದಾರೆ.
ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿದ್ದರು. ಶೇಖ್ ಹಸೀನಾ ಅವರ ನಿರ್ಗಮನದ ನಂತರ, ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಮತ್ತು ಕೇಂದ್ರ ಬ್ಯಾಂಕ್ ಗವರ್ನರ್ ಸೇರಿದಂತೆ ಬಾಂಗ್ಲಾದೇಶದ ಅನೇಕ ಉನ್ನತ ಅಧಿಕಾರಿಗಳನ್ನು ಕಚೇರಿಯಿಂದ ಹೊರಹಾಕಲಾಗಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಯಾಧೀಶರ ವಿರುದ್ಧ ಆಕ್ರೋಶ ತಿರುಗಿತ್ತು.
ಕಳೆದ ವರ್ಷ ನೇಮಕಗೊಂಡ ಒಬೈದುಲ್ ಹಸನ್ ಅವರು ಈ ಹಿಂದೆ ಯುದ್ಧ ಅಪರಾಧಗಳ ನ್ಯಾಯಮಂಡಳಿ ಪ್ರಕರಣವನ್ನು ಆಲಿಸಿದ್ದರು. ಈ ವೇಳೆ ಶೇಖ್ ಹಸೀನಾ ಅವರ ವಿರೋಧಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಲಾಗಿತ್ತು. ಇದು ಸಾಕಷ್ಟು ಟೀಕೆಗೂ ಒಳಗಾಗಿತ್ತು. ಅಂದಿನಿಂದ ಒಬೇದುಲ್ಲಾ ಅವರು ಶೇಖ್ ಹಸೀನಾ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಯೂನಸ್ ಸರ್ಕಾರದ ಭಾಗವಾಗಿರುವ ವಿದ್ಯಾರ್ಥಿ ನಾಯಕ ಆಸಿಫ್ ನಜ್ರುಲ್ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಜನರ ದೊಡ್ಡ ಪ್ರಮಾಣದ ದಂಗೆಗೆ ಹಾನಿಯಾಗುವ ಯಾವುದನ್ನೂ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
The chief justice of Bangladesh’s top court has said he agreed “in principle” to resign after an ultimatum from protesters, days after Prime Minister Sheikh Hasina fled to neighbouring India.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm