ಬ್ರೇಕಿಂಗ್ ನ್ಯೂಸ್
08-12-20 04:48 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 08: ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಗಳ ವಿರುದ್ಧ ಭಾರಿ ಹೋರಾಟ ನಡೆಯುತ್ತಿದೆ. ದೇಶಾದ್ಯಂತ ರೈತರು ಮಂಗಳವಾರ ಭಾರತ್ ಬಂದ್ ನಡೆಸಿದ್ದಾರೆ. ಬಂದ್ಗೆ ವ್ಯಾಪಕ ಬೆಂಬಲ ಸಿಕ್ಕಿದೆ.
ಕೇಂದ್ರ ಸರ್ಕಾರದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಮಂಗಳವಾರ ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಕರೆ ನೀಡಿದ್ದಾರೆ.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರದ ಜೊತೆ ರೈತರು ನಡೆಸಿದ 5 ಸುತ್ತಿನ ಮಾತುಕತೆ ವಿಫಲವಾಗಿದೆ. ಡಿಸೆಂಬರ್ 9ರಂದು 6ನೇ ಸುತ್ತಿನ ಮಾತುಕತೆ ನಿಗದಿಯಾಗಿದೆ.
ಆದರೆ, ಮಂಗಳವಾರ ರೈತರು ಭಾರತ್ ಬಂದ್ ನಡೆಸಿದ ಹಿನ್ನಲೆಯಲ್ಲಿ ಸಂಜೆ ಅವರ ಜೊತೆ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
"ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿದ್ದರು. ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾತುಕತೆಗೆ ಹೋಗಲಿದ್ದಾರೆ" ಎಂದು ರೈತ ಮುಖಂಡ ರಾಕೇಶ್ ತಿಕೈಟ್ ಹೇಳಿದರು.
ಮಂಗಳವಾರ ರೈತರು ಕರೆ ನೀಡಿದ್ದ ಭಾರತ್ ಬಂದ್ಗೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಎಎಪಿ, ಡಿಎಂಕೆ, ಟಿಆರ್ಎಸ್ ಬೆಂಬಲ ನೀಡಿದ್ದವು. ಹಲವಾರು ಸಂಘಟನೆಗಳು ಸಹ ಬಂದ್ ಬೆಂಬಲಿಸಿದ್ದವು. ಆದ್ದರಿಂದ, ಈ ವಿಚಾರ ಗಂಭೀರವಾಗಿದೆ.
ಶನಿವಾರ ಕೇಂದ್ರ ಕೃಷಿ ಸಚಿವರು ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆ ಮಾತುಕತೆ ನಡೆಸಿದ್ದರು. ಕೃಷಿ ನೀತಿಗಳನ್ನು ವಾಪಸ್ ಪಡೆಯುತ್ತಿರೋ?, ಇಲ್ಲವೋ? ಎಂಬ ಬೋರ್ಡ್ಗಳನ್ನು ಹಿಡಿದು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮಾತುಕತೆ ವಿಫಲವಾಗಿತ್ತು.
ಕೃಷಿ ಸಚಿವರು ಡಿಸೆಂಬರ್ 9ರಂದು ಮತ್ತೊಮ್ಮೆ ರೈತರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ರೈತರು ರಸ್ತೆಯಲ್ಲಿಯೇ ಪ್ರತಿಭಟನೆಯನ್ನು ಮುಂದುವರೆಸಿದ್ದರು. ಆದರೆ, ಒಂದು ದಿನ ಮೊದಲೇ ಸರ್ಕಾರ ಮಾತುಕತೆಗೆ ಕರೆದಿದೆ.
Home Minister Amit Shah has called farmers for talks this evening, a day before the government's sixth round of negotiations to end massive protests against farm laws.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm