ಬ್ರೇಕಿಂಗ್ ನ್ಯೂಸ್
23-08-24 04:27 pm HK News Desk ದೇಶ - ವಿದೇಶ
ಮುಂಬೈ, ಆ 23: ಸ್ವಾತಂತ್ರ್ಯ ದಿನಾಚರಣೆಯಂದು ಠಾಣೆಯನ್ನು ಸಂಪೂರ್ಣವಾಗಿ ಅಲಂಕರಿಸಿ ಮೈಕ್ ಸೆಟ್ ಹಾಕಿ ಬಾಲಿವುಡ್ ಹಾಡೊಂದಕ್ಕೆ ಕುಣಿದು ಕುಪ್ಪಳಿಸಿದ್ದ ಇಬ್ಬರು ಪುರುಷ ಹಾಗೂ ಇಬ್ಬರು ಮಹಿಳಾ ಪೊಲೀಸರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿರಿಯ ಅಧಿಕಾರಿಗಳು ನಾಲ್ವರು ಪೊಲೀಸರನ್ನು ಅಮಾನತು ಮಾಡಿದ್ದಾರೆ
ಈ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದ್ದು ಅಲ್ಲಿನ ಗಾಂಧಿಭಾಗ್ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಠಾಣೆ ಮುಂಭಾಗ ತ್ರಿವರ್ಣ ಧ್ವಜದ ಬಲೂನ್ ಗಳನ್ನು ಹಾಕಲಾಗಿದ್ದು, ಆಕರ್ಷಕವಾಗಿ ಕಾಣುವಂತೆ ಮಾಡಲಾಗಿತ್ತು. ಇಷ್ಟೇ ಆಗಿದ್ದರೆ ಪರವಾಗಿಲ್ಲ ಆದರೆ ಮೈಕ್ ಸೆಟ್ ಕೂಡ ಹಾಕಿಸಲಾಗಿದ್ದು, ನಾಲ್ವರು ಪೊಲೀಸರಿಗೆ ನೃತ್ಯ ಮಾಡದೆ ಸುಮ್ಮನೆ ಕುಳಿತುಕೊಳ್ಳಲು ಆಗಿಲ್ಲ.
ಹೀಗಾಗಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅಭಿನಯದ ಹಾಡು ‘ಹೋ ಕೈಕೇ ಪಾನುಬರಸ ವಾಲಾ’ ಹಾಡು ಪ್ಲೇ ಆಗುತ್ತಿದ್ದಂತೆ ಗಾಂಧಿಬಾಗ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಸಂಜಯ್ ಪಟ್ನಾಕರ್, ಮುಖ್ಯಪೇದೆಗಳಾದ ಅಬ್ದುಲ್ ಖಯ್ಯೂಮ್ ಘನಿ ಹಾಗೂ ಭಾಗ್ಯಶ್ರೀ ಗಿರಿ ಮತ್ತು ಮಹಿಳಾ ಪೇದೆ ನಿರ್ಮಲ ಗಾವ್ಳಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಗರಂ ಆದ ಹಿರಿಯ ಅಧಿಕಾರಿಗಳು, ಶಿಸ್ತಿಗೆ ಹೆಸರಾದ ಪೊಲೀಸ್ ಇಲಾಖೆಯಲ್ಲಿ ಅಶಿಸ್ತು ವರ್ತನೆ ತೋರಿದ ಆರೋಪದ ಮೇರೆಗೆ ನಾಲ್ವರನ್ನೂ ಮೂರು ತಿಂಗಳ ಕಾಲ ಸಸ್ಪೆಂಡ್ ಮಾಡಿದ್ದಾರೆ.
Little did they know that if a moment of dancing in the police station would lead to this type of serious consequences, then the present story would have been completely different. This is likely the thought running through the minds of four police personnel from Nagpur's Gandhibaug area, who have been suspended for three months after a video of them dancing in uniform while on duty went viral.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm