ಬ್ರೇಕಿಂಗ್ ನ್ಯೂಸ್
04-09-24 03:05 pm HK News Desk ದೇಶ - ವಿದೇಶ
ಕೊಲ್ಕತ್ತಾ, ಸೆ.4: ಅತ್ಯಾಚಾರ ಸೇರಿದಂತೆ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಮತ್ತು ಇಂತಹ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ಜಾರಿಗೊಳಿಸುವ ನಿಟ್ಟಿನಲ್ಲಿ ಅತ್ಯಾಚಾರ ತಡೆ ವಿಧೇಯಕವನ್ನು ಪಶ್ಚಿಮ ಬಂಗಾಳ ಅಸೆಂಬ್ಲಿಯಲ್ಲಿ ಮಂಡಿಸಿದ್ದು ಅನುಮೋದನೆ ಪಡೆದಿದೆ.
ಕೋಲ್ಕತ್ತಾ ಆಸ್ಪತ್ರೆಯಲ್ಲಿ ಯುವ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರವು ತೀವ್ರ ಒತ್ತಡಕ್ಕೆ ಸಿಲುಕಿತ್ತು. ಹೀಗಾಗಿ ಅತ್ಯಾಚಾರ, ಕೊಲೆ ಪ್ರಕರಣಗಳಲ್ಲಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಮುಂದಾಗಿದೆ. ಕಳೆದ ವಾರ ಈ ಸಂಬಂಧ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದುಕೊಂಡಿದ್ದ ಸರ್ಕಾರ ಅಸೆಂಬ್ಲಿಯಲ್ಲಿ ಅನುಮೋದನೆ ಪಡೆಯುವುದಕ್ಕಾಗಿ ಸೆ.2ರಿಂದ ವಿಶೇಷ ಅಧಿವೇಶನ ನಡೆಸಲಾಗುತ್ತಿದೆ. ಮಂಗಳವಾರ ಸದನದಲ್ಲಿ ಅಪರಾಜಿತ ಮಹಿಳಾ ಮತ್ತು ಮಕ್ಕಳ ಬಿಲ್ 2024 ಕಾಯ್ದೆಯನ್ನು ರಾಜ್ಯ ಕಾನೂನು ಸಚಿವ ಮೊಲೊಯ್ ಘಾಚಕ್ ಮಂಡಿಸಿದ್ದು ಸರ್ವಪಕ್ಷಗಳ ನಾಯಕರಿಂದ ಒಮ್ಮತದೊಂದಿಗೆ ವಿಧೇಯಕ ಅಂಗೀಕಾರಗೊಂಡಿದೆ.
ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ ನಿಟ್ಟಿನಲ್ಲಿ ಅಪರಾಧಗಳಿಗೆ ಸದ್ಯ ಇರುವ ಶಿಕ್ಷೆಯ ಪ್ರಮಾಣ ಹೆಚ್ಚಳ (ಕಠಿಣ) ಮಾಡುವುದು ಹಾಗೂ ವೇಗವಾಗಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆಗೆ ಒಳಡಿಸುವುದು ಮಸೂದೆಯ ಉದ್ದೇಶವಾಗಿದೆ. ಸದ್ಯ ವಿಧಾನಸಭೆಯಲ್ಲಿ ಮಂಡನೆಯಾಗಿದ್ದು, ಸೆಪ್ಟೆಂಬರ್ 5 ರಂದು ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗಲಿದೆ. ರಾಜ್ಯಪಾಲರು ಅಂಕಿತ ಹಾಕಿದರೆ, ಅದೇ ದಿನದಿಂದ ಕಾನೂನು ಜಾರಿಗೆ ಬರಲಿದೆ.
ಅತ್ಯಾಚಾರಗೈದು ಭೀಕರ ಕೊಲೆ ನಡೆಸಿರುವುದು ಸಾಬೀತಾದರೆ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ/ ಜೀವಾವಧಿ ಶಿಕ್ಷೆ ವಿಧಿಸಲು ವಿಧೇಯಕದಲ್ಲಿ ಅನುಮತಿ ಇದೆ. ಈ ಶಿಕ್ಷೆ ಸಂದರ್ಭದಲ್ಲಿ ಅಪರಾಧಿಗೆ ಪರೋಲ್ ನೀಡಲಾಗುವುದಿಲ್ಲ. ಆರೋಪ ಸಾಬೀತಾದ 10 ದಿನದಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಈ ಬಿಲ್ ಅನುಮತಿಸುತ್ತದೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಭಾರತದಲ್ಲಿ ಇದೇ ಮೊದಲು ಪಶ್ಚಿಮ ಬಂಗಾಳದಲ್ಲಿ ಜಾರಿಗೆ ಬಂದಿದೆ ಎನ್ನಲಾಗಿದೆ.
ಮಸೂದೆಯಲ್ಲಿ ಏನಿದೆ ?
ಮಸೂದೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಮಾಡುವ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಅವಕಾಶವಿದೆ.
Amid massive protests over the rape and murder of a 31-year-old doctor in Kolkata's RG Kar Medical College and Hospital, the West Bengal Assembly today passed the Aparajita Bill to amend some provisions in the criminal code, Bharatiya Nyaya Sanhita, for the state. These amendments make penalties for rape and child abuse more stringent.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm